ಧಾರವಾಡ: ‘ರಾಜ್ಯ ಸರ್ಕಾರವು ಧಾರವಾಡ ಪ್ರತ್ಯೇಕ ಪಾಲಿಕೆ ವಿಚಾರದಲ್ಲಿ ರಾಜ್ಯಪಾಲರಿಗೆ ಪ್ರಸ್ತಾವ ಕಳಿಸಿ 11 ತಿಂಗಳಿನಿಂದ ನಿಷ್ಕ್ರಿಯವಾಗಿದೆ, ಕೀಳು ರಾಜಕಾರಣದಲ್ಲಿ ತೊಡಗಿದೆ’ ಎಂದು ಆರೋಪಿಸಿ ಬಿಜೆಪಿಯವರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸುಭಾಸ ರಸ್ತೆಯ ಪಕ್ಷದ ಕಚೇರಿಯಿಂದ ಜುಬಿಲಿ ವೃತ್ತದವರೆಗೆ ಪ್ರತಿಭಟನಾ ಮರವಣಿಗೆ ಸಾಗಿದರು. ರಾಜ್ಯ ಸರ್ಕಾರದ ವಿರೋದ್ದ ಘೋಷಣೆ ಕೂಗಿದರು. ಜುಬಿಲಿ ವೃತ್ತದಲ್ಲಿ ಧರಣಿ ಕುಳಿತರು. ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಯಿತು.

ಪ್ರತಿಭಟನಾಕಾರರು ಜುಬಿಲಿ ವೃತ್ತದಲ್ಲಿ ಮುಖ್ಯಮಂತ್ರಿ ಪ್ರಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.

ತಿಪ್ಪಣ ಮಜ್ಜಗಿ, ಶಿವು ಹೀರೆಮಠ, ಸಂಜಯ ಕಪಟಕರ, ಜೋತಿ ಪಾಟೀಲ, ಮೋಹನ ರಾಮದುರ್ಗ ಇತರರು ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-24-1132914668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.