ಬೆಂಗಳೂರು: ‘ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮುನ್ನವೇ ಆರ್ಸಿಬಿ ಆಡಳಿತ ಮಂಡಳಿ ವಿಜಯೋತ್ಸವ ಮಾಡುತ್ತೇವೆ ಎಂದು ಪೊಲೀಸರಿಗೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ತಂದಿದೆ. ಗೆಲ್ಲುವ ಬಗ್ಗೆ ಅವರಿಗೇನಾದರೂ ಕನಸು ಬಿದ್ದಿತ್ತಾ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

‘ಅಹಮದಾಬಾದ್ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಜೂನ್ 3ರಂದು ಸಂಜೆ ಏಳೂವರೆ ಗಂಟೆಗೆ. ಆದರೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಮಾಡುತ್ತೇವೆ, ಅನುಮತಿ ಕೊಡಿ ಎಂದು ಅಂದು ಸಂಜೆ 6 ಗಂಟೆಗೇ ಆರ್ಸಿಬಿಯವರು ಅರ್ಜಿ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಇದು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.

‘ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಇನ್ನೊಂದು ಅರ್ಜಿ ಕೊಟ್ಟು, ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ಮಾಡೋಕೆ ಅವಕಾಶ ಕೊಡಿ ಎಂದು ಕೇಳುತ್ತಾರೆ. ಇದು ಹೇಗೆ ಸಾಧ್ಯ. ಈ ಎಲ್ಲಾ ಪತ್ರಗಳನ್ನು ಯಾರು ಬರೆದಿದ್ದರು? ಪಂದ್ಯ ಮುಗಿದ ಮರುದಿನ ಬೆಳಗ್ಗೆ 7.30ಕ್ಕೆ, ನಗರ ಪೊಲೀಸ್ ಕಮಿಷನರ್ ಮೇಲೆ ಒತ್ತಡ ಹಾಕಿದ್ದು ಯಾರು ಎನ್ನುವುದನ್ನೂ ಹೇಳಿದ್ದೇನೆ. ನಾನು ವಾಸ್ತವಾಂಶ ತಿಳಿದು ಮಾತಾಡಿದ್ದೇನೆ. ಅಸೂಯೆಯಿಂದ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ನಾನು ಮಾತನಾಡಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಒಳ್ಳೆಯ ಕ್ರಮ:

‘ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದ ರಾಜು ಅವರನ್ನು ಕಿತ್ತು ಹಾಕಿರುವುದು ಒಳ್ಳೆಯ ಕ್ರಮ. ಈ ಸೂಕ್ಷ್ಮ ಜ್ಞಾನೋದಯವಾಗಿರೋದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು ಸರಿಯಲ್ಲ. ಈ ರೀತಿ ಸರ್ಕಾರ ನಡೆದುಕೊಂಡರೆ ಅಧಿಕಾರಿಗಳು ಕೆಲಸ ಮಾಡುವುದಕ್ಕೆ ಸಾಧ್ಯವಿಲ್ಲ. ಅವರ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ ಅಧಿಕಾರಿಗಳ ತಲೆದಂಡ ಮಾಡಿರುವುದು ಸರಿಯಲ್ಲ. ಈ ಘಟನೆಯ ಮೂಲ ಕಾರಣಗಳನ್ನು ಸರ್ಕಾರ ಮರೆಮಾಚುತ್ತದೆ’ ಎಂದು ಟೀಕಿಸಿದರು.

‘ಹೆಣದ ಮೇಲೆ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡುತ್ತಿವೆ’ ಎಂಬ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಹೆಣದ ಮೇಲೆ ರಾಜಕೀಯ ಮಾಡುವ ಅವಶ್ಯಕತೆ ನಮಗೆ ಇಲ್ಲ. ಇದ್ದ ವಿಷಯವನ್ನೇ ನಾನು ಹೇಳಿದ್ದೇನೆ. ನನ್ನ ಮಿತ್ರ ಪಕ್ಷವೂ ಹೇಳಿದೆ. ಇದರಲ್ಲಿ ರಾಜಕೀಯ ಏನಿದೆ? ಕ್ರೀಡಾಂಗಣದ ಮುಂದೆ ಮೃತದೇಹಗಳು ಬಿದ್ದ ಮೇಲೆಯೂ ಕ್ರೀಡಾಂಗಣಕ್ಕೆ ಹೋಗಿ ಕಪ್ಗೆ ಮುತ್ತಿಕ್ಕಿ ಶೋ ಮಾಡಿದ್ದು ಯಾರು? ಜನರೇ ಎಲ್ಲವನ್ನೂ ನೋಡಿದ್ದಾರೆ’ ಎಂದರು.

‘ತರಾತುರಿ ಏಕೆ ಬೇಕಿತ್ತು’

‘ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣದಲ್ಲಿ ತಪ್ಪು ಮಾಡಿರುವ ಮುಖ್ಯಮಂತ್ರಿಕ ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೇ ಸಂಪೂರ್ಣ ಹೊಣೆಯನ್ನು ಹೊರಬೇಕು. ಪಂದ್ಯ ಗೆದ್ದ 24 ಗಂಟೆಯೊಳಗೆ ಆತುರಾತುರವಾಗಿ ಸನ್ಮಾನ ಮಾಡೋ ಅಗತ್ಯ ಏನಿತ್ತು? ಸನ್ಮಾನವನ್ನು ಕಾಟಾಚಾರಕ್ಕೆ ಮಾಡಿದರು. ಆಟಗಾರರನ್ನು ಕೂಡ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಇವರು ಕೊಟ್ಟ ಶಾಲು ಟೋಪಿ ಎಲ್ಲವನ್ನು ಅವರು ತಗೊಂಡು ಹೋದರೋ ಬಿಡಾಡಿ ಹೋದರೋ ಗೊತ್ತಿಲ್ಲ. ಈ ಪುರುಷಾರ್ಥಕ್ಕೆ ತರಾತುರಿಯಲ್ಲಿ ಕಾರ್ಯಕ್ರಮ ಬೇಕಿತ್ತಾ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

‘ಸದನದಲ್ಲಿ ಎಲ್ಲರ ಕಾಲದಲ್ಲಿ ಆಗಿದ್ದು ಮಾತಾಡ್ತೀನಿ’ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ ‘ಸದನದಲ್ಲಿ ಅವರು ಏನು ಮಾತನಾಡುತ್ತಾರೆ? ತಮ್ಮ ಬಳಿ ಏನು ದಾಖಲೆ ಇದೆ ಎನ್ನುವುದನ್ನು ಇಡಲಿ. ಹಿಂದೆ ನಡೆದ ಕಲಾಪಗಳಲ್ಲಿ ಅವರು ಏನೇನು ಮಾಡಿದ್ದರು ಎಂಬುದು ಗೊತ್ತಿದೆ. ಏನ್ ಸಾಧನೆ ಮಾಡಿದ್ದೀನಿ ಅಂತ ಸದನದಲ್ಲಿ ಮಾತಾಡ್ತಾರೆ. ಈ ಘಟನೆ ಬಿಡಿ ಎರಡು ವರ್ಷಗಳಲ್ಲಿ ಇವರ ಸಾಧನೆ ಏನು? ಬೆಂಗಳೂರು ನಗರಕ್ಕೆ ರಾಜ್ಯಕ್ಕೆ ಇವರ ಕೊಡುಗೆ ಏನಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.