ಬೆಳಗಾವಿ: ‘ಸ್ವಾತಂತ್ರ್ಯ ನಂತರ ಭಾರತೀಯ ಸಮಾಜಕ್ಕೆ ಹೊಂದಿಕೊಳ್ಳುವಂತಹ ರಾಜನೀತಿ ಮತ್ತು ಆರ್ಥಿಕ ನೀತಿಯನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಇನ್ನಾದರೂ ಈ ಕಾರ್ಯ ನಡೆಯುವ ಅಗತ್ಯವಿದೆ’ ಎಂದು ರಾಜ್ಯಪಾಲ ವಜೂಭಾಯಿ ಆರ್. ವಾಲಾ ಅಭಿಪ್ರಾಯಪಟ್ಟರು.

ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯ ಅಧ್ಯಯನ ಪೀಠವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಪೀಠ ಸ್ಥಾಪನೆಗೆ ಕೇಂದ್ರ ಸಂಸ್ಕೃತಿ ಸಚಿವಾಲಯ ₹5.78 ಕೋಟಿ ಅನುದಾನ ಕೊಟ್ಟಿದೆ. ದಕ್ಷಿಣ ಭಾರತದಲ್ಲಿ ದೀನದಯಾಳ್ ಹೆಸರಿನಲ್ಲಿ ಇರುವ ಮೊದಲ ಪೀಠ ಇದು ಎಂದು ಹೇಳಲಾಗಿದೆ.

ಪೀಠ ಉದ್ಘಾಟನೆ ಬಳಿಕ ಮಾತನಾಡಿದ ರಾಜ್ಯಪಾಲರು, ‘ಕಾವೇರಿ, ತುಂಗಭದ್ರಾ ಮತ್ತು ಕೃಷ್ಣಾ ನದಿಗೆ ದೊಡ್ಡ ದೊಡ್ಡ ಜಲಾಶಯಗಳನ್ನು ಕಟ್ಟಲಾಗಿದೆ. ಆದರೆ, ನೀರಿನ ಕೊರತೆಯ ಸಮಸ್ಯೆ ಪರಿಹಾರವಾಗಿದೆಯೇ? ಚಿಕ್ಕ ಜಲಾಶಯ ನಿರ್ಮಾಣದಿಂದ ಆ ಭಾಗದ ಜನರಿಗೆ ಅನುಕೂಲವಾಗುತ್ತದೆ’ ಎಂದರು. ‘ರೈತರಿಗೆ ಸಾಲ ಕೊಡಬೇಕಾಗಿಲ್ಲ. ಅವರಿಗೆ ಬೇಕಾಗಿರುವುದು ನೀರು. ನದಿಗಳ ಜೋಡಣೆಯಿಂದ ಇದು ಸಾಧ್ಯವಾಗುತ್ತದೆ. ಇದರೊಂದಿಗೆ ವಾಟರ್ ಗ್ರಿಡ್ ಯೋಜನೆ ಜಾರಿಗೊಳಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.