ಬೆಂಗಳೂರು:ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ಕೆಲಸ ಮಾಡಿದ್ದ ಹಾಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗಿದ್ದ ಜವಾಬ್ದಾರಿ ದಿನೇಶ್ ಗುಂಡೂರಾವ್ ಅವರ ಹೆಗಲಿಗೆ ಬಿದ್ದಿದೆ.

ಎಸ್.ಆರ್. ಪಾಟೀಲ ರಾಜೀನಾಮೆಯಿಂದ ತೆರವಾಗಿದ್ದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿಕೆಪಿಸಿಸಿ ಸ್ಥಾನಕ್ಕೆ ಯುವ ಮುಖ ತರಬೇಕು ಎಂಬ ಬೇಡಿಕೆಯಿತ್ತು.

ಸಂಸದರಾದ ಕೆ.ಎಚ್. ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ಶಾಸಕ ಎಚ್ . ಕೆ. ಪಾಟೀಲ, ಮಾಜಿ ಶಾಸಕ ಟಿ.ಬಿ.ಜಯಚಂದ್ರ ಆಕಾಂಕ್ಷಿಗಳಾಗಿದ್ದರು. ಸಚಿವ ಸ್ಥಾನದ ಜತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕೊಡಿ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬೇಡಿಕೆ ಇಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.