ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಯತ್ನಾಳ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದೂರು

ಸಂಜಯನಗರ ಠಾಣೆಗೆ ದೂರು
Published 7 ಏಪ್ರಿಲ್ 2024, 15:53 IST
Last Updated 7 ಏಪ್ರಿಲ್ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ‘ಆರೋಗ್ಯ ಸಚಿವರಾಗಿರುವ ನನ್ನ ಪತಿ ದಿನೇಶ್ ಗುಂಡೂರಾವ್ ಹಾಗೂ ನಮ್ಮ ಕುಟುಂಬದ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಅವರು ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ.

‘ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬಗ್ಗೆ ಏಪ್ರಿಲ್ 6ರಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದ ಶಾಸಕ ಯತ್ನಾಳ, ‘ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ’ ಎಂಬುದಾಗಿ ಹೇಳಿದ್ದರು. ಈ ಹೇಳಿಕೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ’ ಎಂದು ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ.

‘ರಾಜಕೀಯ ಕಾರಣಕ್ಕಾಗಿ ನಮ್ಮ ಕುಟುಂಬವನ್ನು ಅವಹೇಳನ ಮಾಡಿ ನಿಂದಿಸಿರುವ ಶಾಸಕ ಯತ್ನಾಳ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು, ‘ಕೃತ್ಯ ನಡೆದಿರುವ ಸ್ಥಳದ ಆಧಾರದಲ್ಲಿ ವಿಜಯಪುರ ಜಿಲ್ಲಾ ಪೊಲೀಸರಿಗೆ ದೂರು ಹಸ್ತಾಂತರಿಸಲಾಗುವುದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT