ಬೆಂಗಳೂರು: ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕರ ಹುದ್ದೆಯ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಯನ್ನು ಇಂಗ್ಲಿಷ್ನಲ್ಲೇ ಹೊರಡಿಸಿದ್ದು, ಆಂಗ್ಲ ಭಾಷೆಯಲ್ಲೇ ಅರ್ಜಿ ಹಾಕಲು ಸೂಚಿಸಿರುವ ಉನ್ನತ ಶಿಕ್ಷಣ ಇಲಾಖೆ ವಿರುದ್ಧ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಸರ್ಕಾರದ ಆಡಳಿತ ಭಾಷೆ ಕನ್ನಡವಾಗಿದ್ದರೂ ಇಂಗ್ಲಿಷ್ಗೆ ಆದ್ಯತೆ ನೀಡುತ್ತಿರುವ ಕಾಲೇಜು ಶಿಕ್ಷಣ ಇಲಾಖೆಯ ಕನ್ನಡ ವಿರೋಧಿ ಧೋರಣೆ ಸರಿಯಲ್ಲ. ತಕ್ಷಣವೇ ಅಧಿಸೂಚನೆ ಹಿಂಪಡೆದು, ಕನ್ನಡದಲ್ಲೇ ಮರು ಪ್ರಕಟಿಸಬೇಕು. ಕನ್ನಡದಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಬೇಕು. ಹೊಸ ಅರ್ಜಿ ನಮೂನೆಯನ್ನು ನೀಡಬೇಕು. ಈ ವಿಚಾರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಧ್ಯಪ್ರವೇಶ ಮಾಡಬೇಕು’ ಎಂದು ಅಧ್ಯಾಪಕ ಕೆ.ಆರ್.ಹರೀಶ್ ಒತ್ತಾಯಿಸಿದ್ದಾರೆ.

ಅರ್ಜಿ ಸಲ್ಲಿಕೆಗೆ ಮೇ 30 ಕೊನೆಯ ದಿನವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 15 ವರ್ಷ ಸೇವೆ ಸಲ್ಲಿಸುತ್ತಿರುವ, ಪಿಎಚ್.ಡಿ ಮಾಡಿರುವ ಅಧ್ಯಾಪಕರು ಅರ್ಜಿ ಸಲ್ಲಿಸಬಹುದು ಎಂದು ಉನ್ನತ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.