ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚುನಾವಣೆ ಫಲಿತಾಂಶದ ಚರ್ಚೆ?

ಹುಬ್ಬಳ್ಳಿ: ನಾಳೆಯಿಂದ ಬಿಜೆಪಿ ಕಾರ್ಯಕಾರಿಣಿ ಸಭೆ
Last Updated 26 ಡಿಸೆಂಬರ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು:ಇದೇ 28 ಮತ್ತು 29 ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ವಿಧಾನಪರಿಷತ್‌ ಚುನಾವಣೆ ಫಲಿತಾಂಶ, ಮುಂಬರುವ ಜಿಲ್ಲಾ ಪಂಚಾಯತ್‌ ಮತ್ತು ತಾಲ್ಲೂಕು ಪಂಚಾಯತ್‌ ಚುನಾವಣೆ ಕುರಿತು ಚರ್ಚೆ ನಡೆಯಲಿದೆ.

ಅಲ್ಲದೆ, 2023 ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿಕೊಳ್ಳುವುದರ ಬಗ್ಗೆಯೂ ಸಮಾಲೋಚನೆ ನಡೆಯ
ಲಿದೆ. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಭಾಗವಹಿಸಲಿದ್ದಾರೆ.

ಜನವರಿ 8–9 ಕ್ಕೆ ಶಾ ಭೇಟಿ: ಗೃಹ ಸಚಿವ ಅಮಿತ್‌ ಶಾ ಅವರು ಜನವರಿ 8 ಮತ್ತು 9ಕ್ಕೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಶಾಸಕರು ಮತ್ತು ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಲಕ್ಷ್ಮಣ ಸವದಿ ಬಿಜೆಪಿ ಉಪಾಧ್ಯಕ್ಷ

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಮತ್ತು ನಯನಾ ಗಣೇಶ್‌ ಅವರನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದು, ಇದರಿಂದ ಪಕ್ಷದಲ್ಲಿ ಉಪಾಧ್ಯಕ್ಷರ ಸಂಖ್ಯೆ 12 ಕ್ಕೇರಿದೆ.

ಪಕ್ಷದ ಮುಖ್ಯ ವಕ್ತಾರರಾಗಿದ್ದ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್ ಅವರನ್ನು ಅನಿವಾಸಿ ಭಾರತೀಯ ವಿಭಾಗದ ಸಂಚಾಲಕರನ್ನಾಗಿ ನೇಮಿಸಿದ್ದು, ಮೈಸೂರಿನ ಎಂ.ಜಿ.ಮಹೇಶ್ ಅವರನ್ನು ರಾಜ್ಯ ಮುಖ್ಯ ವಕ್ತಾರರನ್ನಾಗಿ ನೇಮಿಸಲಾಗಿದೆ.

ಪ್ರಕೋಷ್ಠಗಳ ರಾಜ್ಯ ಸಹ ಸಂಯೋಜಕ– ಜಯತೀರ್ಥಕಟ್ಟಿ, ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕ– ಎಚ್‌.ಯೋಗೇಂದ್ರ, ಕಾನೂನು ಪ್ರಕೋಷ್ಠದ ಸಹ ಸಂಚಾಲಕ– ವಿನೋದ್‌ ಪಾಟೀಲ, ಮೀನುಗಾರರ ಪ್ರಕೋಷ್ಠ ರಾಜ್ಯ ಸಂಚಾಲಕ– ಗೋವಿಂದ ಬಾಂಡೇಕರ, ಮೀನುಗಾರರ ಪ್ರಕೋಷ್ಠ ಸಹ ಸಂಚಾಲಕ– ನಾಗಪ್ಪ ಅಂಬಿ, ಫಲಾನುಭವಿಗಳ ಪ್ರಕೋಷ್ಠ, ರಾಜ್ಯ ಸಂಚಾಲಕ– ಬಸವರಾಜ ಮತ್ತಿಮೋಡ.

ಜಿಲ್ಲಾ ಪ್ರಭಾರಿಗಳು: ಜಗದೀಶ ಹಿರೇಮನಿ– ಮಂಡ್ಯ, ಅಮರನಾಥ ಪಾಟೀಲ– ಯಾದಗಿರಿ, ಕೆ.ಶಿವಲಿಂಗಪ್ಪ–ದಾವಣಗೆರೆ, ಸಿ.ಆರ್‌.ಪ್ರೇಮಕುಮಾರ್‌– ಚಿತ್ರದುರ್ಗ, ಕೆ.ವಿ.ಶಿವಪ್ಪ– ಬೆಂಗಳೂರು ಉತ್ತರ ಜಿಲ್ಲೆ, ಮುರಹರಗೌಡ– ಬಳ್ಳಾರಿ, ಚನ್ನಬಸವನಗೌಡ– ವಿಜಯನಗರ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT