ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಔಷಧ ಪೂರೈಕೆಯಲ್ಲಿ ವ್ಯತ್ಯಯ: ಶೀಘ್ರ ಪರಿಹಾರ- ಸಚಿವ ದಿನೇಶ ಗುಂಡೂರಾವ್

Published 5 ಡಿಸೆಂಬರ್ 2023, 16:34 IST
Last Updated 5 ಡಿಸೆಂಬರ್ 2023, 16:34 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಅರೋಗ್ಯ ಕೇಂದ್ರಗಳಿಗೆ ಔಷಧಿಗಳ ಪೂರೈಕೆ ಮಾಡುವ ಕರ್ನಾಟಕ ಔಷಧ ಸರಬರಾಜು ಸಂಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಔಷಧ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ' ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಆಸ್ಪತ್ರೆಗಳಿಗೆ ಅಗತ್ಯವಾಗಿ ಪೂರೈಕೆ ಮಾಡಬೇಕಾದ ಔಷಧಗಳು ಸೂಕ್ತವಾಗಿ ಸರಬರಾಜು ಆಗುತ್ತಿಲ್ಲ. ಪೂರೈಕೆ ಮಾಡುವ ಸಂಸ್ಥೆಯಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಎರಡು-ಮೂರು ತಿಂಗಳಲ್ಲಿ ಸರಿಪಡಿಸಲಾಗುವುದು' ಎಂದರು.

ಬಿಜೆಪಿಗೆ ಯಾಕೆ ಗಾಬರಿ: 'ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮ್‌ ಸಮುದಾಯಕ್ಕೆ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿ ಯಾಕೆ ಇಷ್ಟೊಂದು ಗಾಬರಿಯಾಗುತ್ತಿದೆ' ಎಂದು ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT