ಶಿವಮೊಗ್ಗ: ‘ಸಚಿವ ಸ್ಥಾನಕ್ಕಾಗಿ ಪಕ್ಷದಲ್ಲಿ ಅಸಮಾಧಾನವಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಬಿಜೆಪಿ ಒಂದು ಕುಟುಂಬದ ವ್ಯವಸ್ಥೆಯಿದ್ದಂತೆ. ಕುಟುಂಬದರು ತಮ್ಮ ಭಾವನೆ ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿಗೆ ಅಸಮಾಧಾನಿತರನ್ನೂ ಕರೆದು ಮಾತನಾಡುವ ಶಕ್ತಿ ಇದೆ. ಅವರನ್ನು ಕರೆದು ಮಾತನಾಡಲಿದ್ದೇವೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋರ್ ಕಮಿಟಿಯಲ್ಲಿ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಯಾರಿಗೆ ಸ್ಥಾನ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುವವರ ಪಟ್ಟಿ ಮಾಡಲಾಗಿದೆ. ಆ ಪಟ್ಟಿಯನ್ನುಕೇಂದ್ರಕ್ಕೂ ಕಳುಹಿಸಲಾಗಿದೆ. ಕೇಂದ್ರದ ನಾಯಕರು ಏನು ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡುತ್ತಿದ್ದೇವೆ’ ಎಂದರು.

ಈ ಅಸಮಾಧಾನವನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಲಾಭ ಪಡೆಯಬಹುದಲ್ಲವೇ ಎಂಬ ಪ್ರಶ್ನೆಗೆ, ‘ಕಾಂಗ್ರೆಸ್ ಅವರ ಸದಸ್ಯರನ್ನೇ ಬಿಟ್ಟು ಅಧಿಕಾರ ಕಳೆದುಕೊಂಡರು. ಇನ್ನೂ ಜೆಡಿಎಸ್ ಮೇಲೆಳುವುದೇ ಕಷ್ಟವಾಗಿದೆ. ಇನ್ನೂ ಅವರು ಲಾಭ ಪಡೆದುಕೊಳ್ಳುತ್ತಾರೆ ಎಂದರೆ ಹಾಸ್ಯಾಸ್ಪದ. ಬಿಜೆಪಿಯ ಸಮಸ್ಯೆಯನ್ನು ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕುಳಿತು ಬಗೆಹರಿಸುವ ವಿಶ್ವಾಸವಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.