ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ ವಿತರಣೆ | ಕರುನಾಡಿಗೆ ಏಕೆ ಈ ಅನ್ಯಾಯ: ಪ್ರಧಾನಿ ಮೋದಿಗೆ ಸಿಎಂ ಪ್ರಶ್ನೆ

Published 5 ಫೆಬ್ರುವರಿ 2024, 12:44 IST
Last Updated 5 ಫೆಬ್ರುವರಿ 2024, 12:44 IST
ಅಕ್ಷರ ಗಾತ್ರ

ಬೆಂಗಳೂರು: ತೆರಿಗೆ ಪಾಲು ಹಂಚಿಕೆ ಹಾಗೂ ಬರ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಕರುನಾಡಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, 2017ರಲ್ಲಿ ಕರ್ನಾಟಕಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಬರಪರಿಹಾರವಾಗಿ ಸಿಕ್ಕಿರುವುದು ಬಿಡಿಗಾಸು ಮಾತ್ರ. ಅಲ್ಲದೆ, ಕಳೆದ 4 ತಿಂಗಳಿನಿಂದ ಬರ ಪರಿಹಾರಕ್ಕಾಗಿ ಮೇಲಿಂದ ಮೇಲೆ ಮನವಿ ಸಲ್ಲಿಸಿದರೂ ಈವರೆಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಕರುನಾಡಿಗೆ ಏಕೆ ಈ ಅನ್ಯಾಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

2019ರ ಭೀಕರ ನೆರೆಯಲ್ಲಿ ಕರ್ನಾಟಕದ ಭಾಗಶಃ ಭಾಗ ಮುಳಗಿತ್ತು. ಆ ಸಂದರ್ಭದಲ್ಲಿ ₹35 ಸಾವಿರ ಕೋಟಿ ಪರಿಹಾರ ನೀಡುವಂತೆ ರಾಜ್ಯವು ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಆದರೆ ಕೇಂದ್ರ ರಾಜ್ಯಕ್ಕೆ ಕೊಟ್ಟಿದ್ದು ₹1,869 ಕೋಟಿ ಮಾತ್ರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಭೀಕರ ಬರದಿಂದ ಕರ್ನಾಟಕ ತತ್ತರಿಸಿದೆ. ರಾಜ್ಯದ 216 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದೆ. ಒಟ್ಟು ₹33,770 ಕೋಟಿ ನಷ್ಟ ಸಂಭವಿಸಿದೆ. ಕೇಂದ್ರ ಸರ್ಕಾರಕ್ಕೆ ₹17,901 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೋರಿ ನಾಲ್ಕು ತಿಂಗಳುಗಳು ಕಳೆದರೂ ಈವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ನಮ್ಮವರು ಶ್ರಮದಿಂದ ಕಟ್ಟಿದ ತೆರಿಗೆ ಹಣ ನಮ್ಮವರ ಕಷ್ಟಕಾಲಕ್ಕೆ ಬಾರದಿದ್ದರೆ ಏನು ಪ್ರಯೋಜನ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT