ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತಿಯ ಪಾಟಿ ಸವಾಲಿಗೆ ಪ್ರಯಾಣ ವೆಚ್ಚ: ಕೌಟುಂಬಿಕ ಕೋರ್ಟ್‌ ಆದೇಶ ರದ್ದು

Published 21 ಜೂನ್ 2023, 5:08 IST
Last Updated 21 ಜೂನ್ 2023, 5:08 IST
ಅಕ್ಷರ ಗಾತ್ರ

ಬೆಂಗಳೂರು: ವಿಚ್ಛೇದನ ಮಂಜೂರಾತಿಗೆ ಕೋರಿದ ಪ್ರಕರಣವೊಂದರಲ್ಲಿ; ‘ಪಾಟಿ ಸವಾಲು ಎದುರಿಸಲು ಪತಿ ಅಮೆರಿಕದಿಂದ ಬರಬೇಕಿರುವ ಹಿನ್ನೆಲೆಯಲ್ಲಿ ಆತನ ಪ್ರಯಾಣಕ್ಕೆ ತಗುಲುವ ₹ 1.65 ಲಕ್ಷ ಭರಿಸಿ‘ ಎಂದು ಪತ್ನಿಗೆ ನಿರ್ದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ರಿಟ್‌ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದ್ದು, ‘ದಂಪತಿಗೆ ಅನುಕೂಲವಿರುವಂತೆ ಪಾಟಿ ಸವಾಲು ವ್ಯವಸ್ಥೆ ಮಾಡಬೇಕು. ಮುಂದಿನ ನಾಲ್ಕು ತಿಂಗಳಲ್ಲಿ ವಿಚ್ಛೇದನ ಕೋರಿಕೆ ಅರ್ಜಿ ಇತ್ಯರ್ಥಪಡಿಸಬೇಕು‘ ಎಂದು ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.

‘ಪ್ರಕರಣದಲ್ಲಿ ಪತಿಯೇ ವಿವಾಹ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪಾಟಿ ಸವಾಲಿಗೆ ಒಳಪಡಲು ಅವರು ಅಮೆರಿಕದಿಂದ ಭಾರತಕ್ಕೆ ಬಂದು ಹೋಗುವ ಪ್ರಯಾಣದ ವೆಚ್ಚ ಭರಿಸಲಾಗದಷ್ಟು ಬಡತನ ಅವರಿಗಿಲ್ಲ. ವಿವಾಹ ವಿಚ್ಛೇದನದಂತಹ ಗಂಭೀರ ಪ್ರಕರಣದಲ್ಲಿ ಪತಿಯನ್ನು ಪಾಟಿ ಸವಾಲಿಗೆ ಗುರಿಪಡಿಸುವುದು ಪತ್ನಿಯ ಹಕ್ಕು. ಯಾವುದೇ ಸಂದರ್ಭದಲ್ಲೂ ಹೊರಲು ಸಾಧ್ಯವಿಲ್ಲದಂತಹ ಪರಿಸ್ಥಿತಿಯನ್ನು ನ್ಯಾಯಾಲಯವು ಪ್ರಕರಣದ ಪಕ್ಷಗಾರರ ಮೇಲೆ ಹೊರಿಸಬಾರದು. ಹಾಗಾಗಿ, ಕೌಟುಂಬಿಕ ನ್ಯಾಯಾಲಯದ ಆದೇಶ ಕಾನೂನು ಬಾಹಿರವಾಗಿದೆ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT