ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯ ತೆರಿಗೆ ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪ: ಡಿಕೆಶಿ ವಿಚಾರಣೆ 

Last Updated 2 ಆಗಸ್ಟ್ 2018, 6:17 IST
ಅಕ್ಷರ ಗಾತ್ರ

ಬೆಂಗಳೂರು: ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ ದೂರಿನ ವಿಚಾರಣೆ ನಗರದ ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿಗುರುವಾರ ನಡೆಯಲಿದೆ.

ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಶಿವಕುಮಾರ್ ವಿರುದ್ಧ ಐಟಿ ಕಾಯಿದೆ ಸೆಕ್ಷನ್ 277, 278, 193, 199, ಹಾಗೂ 120(ಬಿ) ಅಡಿ ದೂರು ದಾಖಲಿಸಲಾಗಿತ್ತು.

ಕೇಸ್ ವಿಚಾರಣೆ ನಡೆಸಿದ್ದ ನ್ಯಾ.ಎಂ.ಎಸ್. ಆಳ್ವಾ ಅವರು ಡಿ.ಕೆ. ಶಿವಕುಮಾರ್ ಅವರನ್ನು ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು.

ಶಿವಕುಮಾರ್ ಜೊತೆ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರಗೂ ಸಮನ್ಸ್ ಜಾರಿಯಾಗಿತ್ತು. ಆದರೆಡಿ.ಕೆ.ಶಿವಕುಮಾರ್ ಆಪ್ತ ಸಚಿನ್ ನಾರಾಯಣ್ ವಿರುದ್ಧದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಹಿನ್ನಲೆಯಲ್ಲಿ ಸಚಿನ್ ನಾರಾಯಣ್ ಹೊರತುಪಡಿಸಿ ಉಳಿದ ಆರೋಪಿಗಳು ಇಂದು ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT