ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾತನಾದ ಖುಷಿಯಲ್ಲಿದ್ದಾರೆ. ಡಿಕೆಶಿ ಪುತ್ರಿ ಐಶ್ವರ್ಯಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಶುಕ್ರವಾರ ಕಾರ್ಮಿಕರ ದಿನದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದರು. ಕಾರ್ಯಕ್ರಮವೊಂದರ ನಡುವೆ ಡಿಕೆಶಿ ಅವರಿಗೆ ಈ ಸುದ್ದಿ ತಲುಪಿದ್ದು, ಕೂಡಲೇ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಮೇ 1ರಂದು ಮಾಜಿ ಸಿಎಂ ದಿವಂಗತ ಎಸ್.ಎಂ. ಕೃಷ್ಣ ಅವರ ಜನ್ಮದಿನ. ಎಸ್.ಎಂ. ಕೃಷ್ಣ ಅವರ ಮೊಮ್ಮಗ ಅಮರ್ತ್ಯ ಹೆಗ್ಡೆ–ಐಶ್ವರ್ಯಾ ದಂಪತಿಗೆ ಮಗುವಿನ ಜನ್ಮವಾಗಿದೆ. ಕೃಷ್ಣ ಅವರ ಜನ್ಮದಿನದಂದೇ ಮಗುವಿನ ಜನನ ಎರಡು ಕುಟುಂಬಗಳ ಸಂಭ್ರಮಕ್ಕೂ ಕಾರಣವಾಗಿದೆ. ರಾಜಕೀಯ ವಲಯದಲ್ಲಿಯೂ ಈ ಸಂತಸದ ಸುದ್ದಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.