ಬೆಂಗಳೂರು: ‘ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ಯಾರೂ ನನ್ನ ಜನ್ಮದಿನಾಚರಣೆ (ಮೇ 15) ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಮನವಿ ಮಾಡಿದ್ದಾರೆ.

ಮೇ 15ರಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ, ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಸದ್ಯದ ಪರಿಸ್ಥಿತಿ ಅರ್ಥ ಮಾಡಿಕೊಂಡು ಸಹಕರಿಸುವಂತೆ ಅಭಿಮಾನಿಗಳು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ವಿನಂತಿ ಮಾಡಿದ್ದಾರೆ.

ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ. ನೀವು ಇರುವ ಜಾಗದಿಂದಲೇ ನನಗೆ ಶುಭ ಹಾರೈಸಿ ಆಶಿರ್ವದಿಸಿ ಎಂದು ಡಿ.ಕೆ. ಶಿವಕುಮಾರ್ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.
.ಗುತ್ತಿಗೆದಾರರಿಗೆ ಬಾಕಿ ಹಣ ಶೀಘ್ರ ಬಿಡುಗಡೆ: ಡಿ.ಕೆ. ಶಿವಕುಮಾರ್ ಭರವಸೆ.ಇದೇ 20ರಂದು ಲಕ್ಷ ಜನರಿಗೆ ಪಟ್ಟಾ ಖಾತೆ ವಿತರಣೆ: ಡಿ.ಕೆ. ಶಿವಕುಮಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.