ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಹಂತದಲ್ಲಿ ಸಂಪುಟಲ್ಲಿ ಪ್ರಮುಖ ಸಮುದಾಯಗಳಿಗೆ ಮಣೆ ಹಾಕಲಾಗಿದೆ. ‘ಅಹಿಂದ’ಕ್ಕೆ ಆದ್ಯತೆ ನೀಡಲಾಗಿದೆ.

ಸಂಪುಟದಲ್ಲಿ ನಾಲ್ವರು ದಲಿತರು, ಒಬ್ಬ ಒಕ್ಕಲಿಗ, ಮೂವರು ಲಿಂಗಾಯತ, ತಲಾ ಇಬ್ಬರು ಅಲ್ಪಸಂಖ್ಯಾತ, ಕುರುಬ ಸಮುದಾಯದವರು, ಒಬ್ಬರು ರೆಡ್ಡಿ ಸಮುದಾಯದವರಿಗೆ ಅವಕಾಶ ನೀಡಲಾಗಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಕ್ಕಲಿಗ. ದಲಿತ ವರ್ಗದವರ ಪೈಕಿ ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ ಬಲಗೈ ಸಮುದಾಯದವರು. ಕೆ.ಎಚ್.ಮುನಿಯಪ್ಪ ಎಡಗೈ ಸಮುದಾಯಕ್ಕೆ ಸೇರಿದವರು.

ಲಿಂಗಾಯತ ಸಮುದಾಯದಿಂದ ಎಂ.ಬಿ. ಪಾಟೀಲ, ಶರಣಪ್ರಕಾಶ್ ಪಾಟೀಲ ಮತ್ತು ಈಶ್ವರ್ಖಂಡ್ರೆ ಅವರಿಗೆ ಅವಕಾಶ ನೀಡಲಾಗಿದೆ.

ಪರಿಶಿಷ್ಟ ಪಂಗಡದಿಂದ ಸತೀಶ ಜಾರಕಿಹೊಳಿಗೆ ಸಚಿವ ಸ್ಥಾನ ದಕ್ಕಿದೆ. ಒಕ್ಕಲಿಗ ಸಮುದಾಯದಲ್ಲಿ ಕೃಷ್ಣಬೈರೇಗೌಡ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.

ಅಲ್ಪಸಂಖ್ಯಾತ ಸಮುದಾಯದವರಲ್ಲಿ ಯು.ಟಿ.ಖಾದರ್ (ಮುಸ್ಲಿಂ) ಮತ್ತು ಕೆ.ಜೆ.ಜಾರ್ಜ್ (ಕ್ರೈಸ್ತ) ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ರೆಡ್ಡಿ ಸಮುದಾಯದ ರಾಮಲಿಂಗಾರೆಡ್ಡಿ, ಕುರುಬ ಸಮುದಾಯದಿಂದ ಬೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅವಕಾಶ ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.