ಬೆಂಗಳೂರು: ಹಾಸನದಲ್ಲಿ ಡಿ. 5ರಂದು ನಡೆಯಲಿರುವ ಪಕ್ಷದ ಸಮಾವೇಶದ ಕುರಿತು ಚರ್ಚಿಸಲು ಮೈಸೂರು ಭಾಗದ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಸಭೆ ಭಾನುವಾರ (ಡಿ. 1) ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಸಭೆ ನಡೆಯಲಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು, ಸಂಸದರು, ಶಾಸಕರು, 2024ರ ಲೋಕಸಭೆ ಮತ್ತು 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಜಿಲ್ಲಾ ಘಟಕಗಳ ಅಧ್ಯಕ್ಷರು, ಕೆಪಿಸಿಸಿ ಉಸ್ತುವಾರಿ ಪದಾಧಿಕಾರಿಗಳು ಮತ್ತು ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರನ್ನು ಈ ಸಭೆಗೆ ಆಹ್ವಾನಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.