ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ
‘ಕಾಲ್ತುಳಿತದ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಮತ್ತು ರಾಜಕೀಯಕ್ಕಾಗಿ ಅವರು ಮಾತನಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು ‘ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ’ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ‘ಈ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಯಾರು ಜವಾಬ್ದಾರರು ಇದ್ದಾರೆ ಯಾರು ಲೋಪ ಎಸಗಿದ್ದಾರೆ ಅಂತಹವರ ಮೇಲೆ ಮಾತ್ರ ಕ್ರಮ ಕೈಗೊಂಡಿದ್ದೇವೆ’ ಎಂದರು.