ಹಾನಗಲ್: ತಳ ಹಂತದಿಂದ ಬೆಳೆದು ಬಂದಿರುವ ಕಾಂಗ್ರೆಸ್ ಪಕ್ಷದ ಕಟ್ಟಾಳು ಡಿ.ಕೆ.ಶಿವಕುಮಾರ ಅವರು ಸರ್ಕಾರದ ನಾಯಕತ್ವ ವಹಿಸಿಕೊಳ್ಳಲಿದ್ದು, ಇನ್ನು ಮುಂದೆ ನಾಡಿನಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಸಂತಸ ವ್ಯಕ್ತಪಡಿಸಿದ್ದಾರೆ.

ಶನಿವಾರ ಬೆಂಗಳೂರಿನಿಂದ ಸುದ್ದಿಗಾರರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು ಸಂಘಟನೆ, ಹೋರಾಟ, ಪರಿಶ್ರಮ ಇವನ್ನೆಲ್ಲ ಒಳಗೊಂಡಂತೆ ಅಪರೂಪದ ನಾಯಕತ್ವದ ಗುಣ ಮೈಗೂಡಿಸಿಕೊಂಡಿರುವ ಡಿ.ಕೆ.ಶಿವಕುಮಾರ ಅವರಲ್ಲಿ ನಾಯಕರನ್ನು ತಯಾರು ಮಾಡುವಂಥ ಸಾಮರ್ಥ್ಯವಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡು, ಯುವ ಕಾಂಗ್ರೆಸ್ ಮೂಲಕ ಬೆಳೆದು ಬಂದಿರುವ ನಾಯಕ ಡಿ.ಕೆ.ಶಿವಕುಮಾರ ಅವರು 6 ವರ್ಷಗಳಿಂದ ಕೆಪಿಸಿಸಿ ನಾಯಕತ್ವ ವಹಿಸಿಕೊಂಡು ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭದ್ರವಾದ ನೆಲೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಕರ್ತರನ್ನು ಬೆಳೆಸುವಂಥ ಒಬ್ಬ ನಾಯಕನಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿರುವುದು ಖುಷಿ ತರುವ ವಿಷಯವಾಗಿದ್ದು, ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ನೋಡಲು ಕಾತರರಾಗಿದ್ದೇವೆ ಎಂದರು.

ಹಾವೇರಿ ಜಿಲ್ಲೆಯಲ್ಲಿ ಎಲ್ಲ 6 ಸ್ಥಾನಗಳಲ್ಲಿಯೂ ಸಹ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಜಿಲ್ಲೆ ಸಂಪೂರ್ಣವಾಗಿ ಬಿಜೆಪಿ ಮುಕ್ತವಾಗಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-22-1702480905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.