ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ADVERTISEMENT
ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ
ADVERTISEMENT
ಪಕ್ಷದ ನೂತನ ನಾಯಕರಾಗಿ ಡಿ. ಕೆ. ಶಿವಕುಮಾರ್ ಅವರು ಆಯ್ಕೆ
ಇದಕ್ಕೂ ಮೊದಲು ಸಭೆಯ ಆರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಪ್ರಕ್ರಿಯೆಯು ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಯೊಂದಿಗೆ ನಡೆಯಲಿದೆ ಎಂದು ಎಐಸಿಸಿ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಪ್ರಕಟಿಸಿ, ಚಾಲನೆ ನೀಡಿದರು.
ಡಿ.ಕೆ.ಶಿವಕುಮಾರ್
ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ವಿಚಾರವನ್ನು ಎಐಸಿಸಿ ವಿವೇಚನೆಗೆ ಬಿಡಲಾಗಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದರು. ಪರಮೇಶ್ವರ್ ಅವರು ಅನುಮೋದಿಸಿದರು. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಇದನ್ನು ಬೆಂಬಲಿಸಿದರು.