ಬೆಂಗಳೂರು: ‘ಕೇರಳ ಮುಖ್ಯಮಂತ್ರಿ, ಕೇರಳ ಸರ್ಕಾರ ಕರ್ನಾಟಕದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದಿದ್ದೇನೆ. ಕೇರಳಿಗರ ವಿರುದ್ಧ ಮಾತನಾಡಿಲ್ಲ. ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ನನ್ನ ಹೇಳಿಕೆ ತಿರುಚಿ ಜನರ ದಾರಿ ತಪ್ಪಿಸುತ್ತಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

‘ನಮಗೆ ಕೇರಳಿಗರ ಅಗತ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ’ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ‘ಕೇರಳದ ಜನರು ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಅವರು ನನ್ನನ್ನು ಬಹಳ ಪ್ರೀತಿಸುತ್ತಾರೆ. ನನಗೂ ಅವರ ಮೇಲೆ ಗೌರವವಿದೆ’ ಎಂದರು.

‘ಕೇರಳ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಅಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ನಿಶ್ಚಿತ. ಹಾಗಾಗಿ, ಬಿಜೆಪಿ ಗೊಂದಲ ಸೃಷ್ಟಿಸಲು ಮುಂದಾಗಿದೆ. ಎರಡೂ ರಾಜ್ಯಗಳ ಜನರ ಬಾಂಧವ್ಯಕ್ಕೆ ಹುಳಿ ಹಿಂಡುತ್ತಿದ್ದಾರೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.