ಲಕ್ಷ್ಮೇಶ್ವರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ರಾಜ್ಯದ ಮುಖ್ಯಮಂತ್ರಿ ಆಗಲು ತಾಲ್ಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದ ವೀರಗಂಗಾಧರ ಶಿವಾಚಾರ್ಯರ ಆಶೀರ್ವಾದ ಇದೆ’ ಎಂದು ಮುಕ್ತಿ ಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘40 ದಿನಗಳ ಹಿಂದಷ್ಟೆ ಡಿ.ಕೆ. ಶಿವಕುಮಾರ ಅವರು ಮುಕ್ತಿಮಂದಿರ ಕ್ಷೇತ್ರಕ್ಕೆ ಬಂದು ವೀರಗಂಗಾಧರ ಶಿವಾಚಾರ್ಯರ ಗದ್ದುಗೆಗೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದರು. ಈಗ ಅವರ ಪೂಜೆ ಫಲಿಸಿದ್ದು, ಕೆಲವೇ ದಿನಗಳಲ್ಲೇ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ’ ಎಂದು ಹೇಳಿದರು.

‘ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ಶಾಂತಿ’ ಎಂಬ ಮಂತ್ರ ಸಾರಿದ ಗಂಗಾಧರ ಶಿವಾಚಾರ್ಯರು ತಪೋನಿಷ್ಠರು. ಈಗಲೂ ಭಕ್ತರ ಆಸೆಗಳನ್ನು ಈಡೇರಿಸುತ್ತಿದ್ದಾರೆ.ಮುಕ್ತಿಮಂದಿರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪನೆ ಮಾಡಬೇಕು ಎಂದು ವೀರಗಂಗಾಧರ ಸ್ವಾಮೀಜಿ ಕನಸು ಕಂಡಿದ್ದರು. ಆದರೆ ಅದು ಅವರ ಅವರ ಜೀವಿತಾವಧಿಯಲ್ಲಿ ನೆರವೇರಲಿಲ್ಲ. ಇದೀಗ ಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪನಾ ಕಾರ್ಯ ಭರದಿಂದ ಸಾಗಿದ್ದು, ಡಿ.ಕೆ. ಶಿವಕುಮಾರ ಅವರು ಸಹಾಯ ಮಾಡಿದ್ದಾರೆ. ಕೆಲ ದಿನಗಳಲ್ಲೇ ಕೆಲಸಗಳು ಮುಗಿಯಲಿದ್ದು, ತ್ರಿಕೋಟಿ ಶಿವಲಿಂಗ ಉದ್ಘಾಟನೆಯ ಪೂಜಾ ಕಾರ್ಯಕ್ಕೆ ಡಿ.ಕೆ. ಶಿವಕುಮಾರ ಅವರನ್ನು ಆಹ್ವಾನಿಸಲಾಗುವುದು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-23-471165859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.