ಕನಕಪುರ: ನಾನು ಮುಖ್ಯಮಂತ್ರಿಯಾಗಲಿ ಎಂದು ಜನ ಮತ್ತು ಸ್ವಾಮೀಜಿಗಳು ಬಯಸುತ್ತಾರೆ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ಪಕ್ಷ ಕಟ್ಟಿರುವ ನಾವೆಲ್ಲರೂ ,ಪಕ್ಷದ ಶಿಸ್ತಿನ ಸಿಪಾಯಿಗಳು. ಪಕ್ಷ ಏನು ಹೇಳುತ್ತದೊ, ಅದನ್ನ ಕೇಳಿಕೊಂಡು ಹೋಗುವವರು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಬೇಕು ಎಂಬ ಆಶಯ ವ್ಯಕ್ತಪಡಿಸಿದ ಬಾಳೆಹೊನ್ನೂರಿನ ರಂಭಾಪುರಿ ಮಠದ ವೀರ ಸೋಮೇಶ್ವರ ಸ್ವಾಮೀಜಿ ಹೇಳಿಕೆ ಕುರಿತು ತಾಲ್ಲೂಕಿನ ಕೋಡಿಹಳ್ಳಿ ನಿವಾಸದಲ್ಲಿ ಸುದ್ದಿಗಾರರಿಗೆ ಅವರು ಪ್ರತಿಕ್ರಿಯಿಸಿದರು.

ಕೆಲವರು ಚಪಲಕ್ಕೆ ಮಾತನಾಡುತ್ತಾರೆ.

ಅದರ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಯಾರೂ ಮಾತನಾಡಬಾರದು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಹೇಳಿದ್ದಾರೆ. ಪಕ್ಷ ಹೇಳಿದ್ದನ್ನು ಕೇಳಿಕೊಂಡು ಹೋಗುತ್ತೇವೆ. ಜನರ ಭಾವನೆಯಂತೆ ಕೆಲಸ ಮಾಡಬೇಕು ಎಂದರು.

ಒಡಂಬಡಿಕೆಯಂತೆ ಅಧಿಕಾರ ನೀಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರಲ್ಲ ಎಂಬ ಪ್ರಶ್ನೆಗೆ, ಅದನ್ನು ಸಾರ್ವಜನಿಕವಾಗಿ ಯಾಕೆ ಮಾತನಾಡಲಿ ನಾನುಂಟು, ಪಕ್ಷ ಉಂಟು. ನಾವೆಲ್ಲ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.