ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. 2023ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಅವರು ಮಾಡಿದ ಪ್ರಯತ್ನಗಳು ಅನನ್ಯ. ಬೇರು ಮಟ್ಟದಿಂದ ಪಕ್ಷವನ್ನು ಬಲವರ್ಧನೆಗೊಳಿಸಿ, ಪಕ್ಷವನ್ನು ಅಧಿಕಾರಕ್ಕೆ ತಂದರೂ, ಅವರಿಗೆ ಮುಖ್ಯಮಂತ್ರಿಯಾಗುವ ಭಾಗ್ಯ ಕೂಡಿ ಬರಲಿಲ್ಲ. ಉಪಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರು.
.ರಾಜಕೀಯ ರಣಾಂಗಣದಲ್ಲಿ ಡಿ.ಕೆ ಶಿವಕುಮಾರ್ Vs ದೇವೇಗೌಡ ಕುಟುಂಬ.
ಅಂದಹಾಗೆ ಅವರು ಪಕ್ಷದ ಚುಕ್ಕಾಣಿ ಹಿಡಿದಿದ್ದು, ಅತ್ಯಂತ ಕಠಿಣ ಸಂದರ್ಭದಲ್ಲಿ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದರೂ ಕುಮಾರಸ್ವಾಮಿ ಅವರಿಗೆ ಬೆಂಬಲ ಕೊಟ್ಟು ಮೈತ್ರಿ ಸರ್ಕಾರ ರಚಿಸಿತ್ತು.

2019ರ ಲೋಕಸಭೆ ಚುನಾವಣೆ ಬಳಿಕ ಬಿ.ಎಸ್. ಯಡಿಯೂರಪ್ಪ ನಡೆಸಿದ ಆಪರೇಷನ್ ಕಮಲದ ಕಾರಣದಿಂದಾಗಿ, ಕಾಂಗ್ರೆಸ್ನ 16 ಶಾಸಕರು ರಾಜೀನಾಮೆ ಕೊಟ್ಟಿದ್ದರು. ಇದರಿಂದಾಗಿ ಬಿಜೆಪಿ ಸರ್ಕಾರ ಬಂದಿತ್ತು.
.ಅಲರ್ಜಿ ಇದೆ, ಹೂವಿನ ಹಾರ ಹಾಕಬೇಡಿ: ಡಿ.ಕೆ. ಶಿವಕುಮಾರ್ ಮನವಿ .
ಕೆಲವರು ಕಾಂಗ್ರೆಸ್ ತೊರೆದಿದ್ದು, ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾದ ಹೊತ್ತಿನೊಳಗೆ ಪಕ್ಷಕ್ಕೆ ಮರು ಜೀವ ಕೊಡುವ ಹೊಣೆ ಹೊರಲು ಯಾರೂ ಸಿದ್ದರಿರಲಿಲ್ಲ. ಆ ಕಠಿಣ ಪರಿಸ್ಥಿತಿಯಲ್ಲಿ ಹೆಗಲು ಕೊಟ್ಟವರು ಶಿವಕುಮಾರ್.

ಅದಾದ ಕೆಲವೇ ತಿಂಗಳುಗಳಲ್ಲಿ ಕೋವಿಡ್ ಆವರಿಸಿತು. ಅಂತಹ ಸಂಕಷ್ಟದ ಸಮಯದಲ್ಲಿ ಜನರ ಜತೆಗೆ ನಿಂತ ಶಿವಕುಮಾರ್, ಪಕ್ಷದ ಪರ ಒಲವುಗಳಿಸಲು ಯಶಸ್ವಿಯಾದರು. ಸಿದ್ದರಾಮಯ್ಯ ಅವರ ಹೆಗಲಿಗೆ ಹೆಗಲು ಕೊಟ್ಟು, ಬಿಜೆಪಿ ಸರ್ಕಾರದ ವಿರುದ್ಧ ಹಲವು ಹೋರಾಟಗಳನ್ನು ನಡೆಸಿದರು. ಪರಿಣಾಮ 2023ರಲ್ಲಿ ಕಾಂಗ್ರೆಸ್ಗೆ ಅಧಿಕಾರ ದಕ್ಕಿತು.
.ಡಿ.ಕೆ. ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮ: ವಾಹನ ಸವಾರರಿಗೆ ಸಂಚಾರ ಸಲಹೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.