ಬೆಂಗಳೂರು: ‘ನಿಗಮ– ಮಂಡಳಿಗಳಿಗೆ ನೇಮಕಗೊಂಡವರ ಪಟ್ಟಿಯನ್ನು 3–4 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಆಗಸ್ಟ್ 5ರ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಇಬ್ಬರಂತೆ ಸುಮಾರು 700 ಜನರಿಗೆ ಸ್ಥಾನಮಾನ ನೀಡಲು ತೀರ್ಮಾನಿಸಲಾಗಿದೆ. 30 ಜನರಲ್ಲಿ ಕೆಲವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಕೆಲವರಿಗೆ ಉಪಾಧ್ಯಕ್ಷ ಹುದ್ದೆ ನೀಡಲಾಗುತ್ತಿದೆ. ಪಕ್ಷದ ಹೈಕಮಾಂಡ್ ಪಟ್ಟಿಯನ್ನು ಅಂತಿಮಗೊಳಿಸಲಿದೆ’ ಎಂದರು.

ಮತ, ಹಕ್ಕು ರಕ್ಷಣೆಗೆ ಸಿದ್ಧರಾಗಿ: ‘ರಾಜ್ಯದಲ್ಲಿ ನಡೆದ ಚುನಾವಣಾ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯದ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5ರಂದು ಪ್ರತಿಭಟನೆ ನಡೆಯಲಿದ್ದು, ಪಕ್ಷದ ಕಾರ್ಯಕರ್ತರು, ಮುಖಂಡರು ತಮ್ಮ ಮತ, ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು’ ಎಂದರು.

‘ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ವೇಳೆ ಮತದಾನದ ಅಕ್ರಮದ ಬಗ್ಗೆ ಸಂಶೋಧನೆ ಮಾಡಿದ್ದೆವು. ಬಿಜೆಪಿಯವರು ತಮ್ಮ ಕಾರ್ಯಕರ್ತರಿಗೆ ಚುನಾವಣಾ ಆಯೋಗದ ಗುರುತಿನ ಚೀಟಿ ನೀಡಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಅಕ್ರಮ ಎಸಗಿದ್ದರು’ ಎಂದರು.

‘ವಿಧಾನಸಭೆ ಚುನಾವಣೆ ನಂತರ ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಅಕ್ರಮದ ಕೆಲವು ಮಾಹಿತಿ ನನಗೆ ನೀಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆದ ಬಗ್ಗೆ ನಮ್ಮ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರು ಪರಿಶೀಲನೆ ಮುಂದುವರಿಸಿದ್ದಾರೆ. ಪಕ್ಷದ ವತಿಯಿಂದ ಅಧ್ಯಯನ ಮಾಡಿ ಎಲ್ಲ ಮಾಹಿತಿಯನ್ನು ದೆಹಲಿಗೆ ತಲುಪಿಸಿದ್ದೇವೆ. ಇಲ್ಲಿ ಆಗಿರುವ ಅಕ್ರಮದ ಬಗ್ಗೆ ನಾನು ಬಿಡಿಸಿ ಹೇಳುವುದಿಲ್ಲ. ಈ ವಿಚಾರ ಯಾರ ಬಾಯಿಂದ ಬರಬೇಕೊ ಅವರಿಂದಲೇ ಬರಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.