ಶಿವಮೊಗ್ಗ: 'ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತುತ್ತಿಲ್ಲ. ಅವರೆಲ್ಲ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಕಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಕೇಂದ್ರ ಬಜೆಟ್ ಬಗೆಗೆ ರಾಜ್ಯದ ನಿರೀಕ್ಷೆಗಳ ಬಗ್ಗೆ ಕೇಳಿದಾಗ ಮೇಲಿನಂತೆ ಪ್ರತಿಕ್ರಿಯಿಸಿದರು.

'ಈ ಹಿಂದೆ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿ ಕೇಂದ್ರ ಸರ್ಕಾರ ಕೊಟ್ಟಿಲ್ಲ” ಎಂದು ಟೀಕಿಸಿದರು.

ಕಾಂಗ್ರೆಸ್ ನಾಯಕರ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್ ಅಭಿಯಾನ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, 'ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್ ಸೇರಿದಂತೆ ಹಿಂದೆ ಇದ್ದಂತಹ ಸರ್ಕಾರದ ವಿರುದ್ಧ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ' ಎಂದರು.

'ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ಹೇಳಿದ್ದಾರೆ. ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ' ಎಂದರು.

ಮಲೆನಾಡಿನಲ್ಲಿ ಕೆಎಫ್ ಡಿ (ಮಂಗನ ಕಾಯಿಲೆ)ಯಿಂದ ಸಾವನ್ನಪ್ಪುತ್ತಿರುವವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದೇ ಎಂಬ ಪ್ರಶ್ನೆಗೆ, “ಅದರ ಬಗ್ಗೆ ಪರಿಶೀಲಿಸಿ ತಿಳಿಸುತ್ತೇನೆ” ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.