‘ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ’
‘ನ್ಯಾಷನಲ್ ಹೆರಾಲ್ಡ್ ಪತ್ರಿಕೆ ರಾಹುಲ್ ಗಾಂಧಿ ಸೋನಿಯಾ ಗಾಂಧಿ ಅವರ ಆಸ್ತಿಯಲ್ಲ. ದೇಶದ ಆಸ್ತಿ. ಸೋನಿಯಾ ಗಾಂಧಿ ರಾಹುಲ್ ಗಾಂಧಿ ಮೋತಿಲಾಲ್ ವೋಹ್ರಾ ಆಸ್ಕರ್ ಫರ್ನಾಂಡೀಸ್ ಅವರ ಹೆಸರಿನಲ್ಲಿ ನ್ಯಾಷನಲ್ ಹೆರಾಲ್ಡ್‌ನ ಸ್ವಲ್ಪ ಷೇರುಗಳನ್ನು ನೀಡಲಾಗಿತ್ತು. ಅದಕ್ಕೆ ಅವರ ಮೇಲೆ ಪಿಎಂಎಲ್ಎ ಪ್ರಕರಣ ದಾಖಲಿಸಿ ಕೊಡಬಾರದ ಕಿರುಕುಳ ನೀಡಲಾಗುತ್ತಿದೆ. ದ್ವೇಷ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ ಸುಳ್ಳು ಕೇಸ್‌ಗಳಿಗೆ ಆಯುಷ್ಯವಿಲ್ಲ. ಪಿತೂರಿಯಿಂದ ಸೋಲಿಸಲು ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ. ನಾವು ಸತ್ಯಮೇವ ಜಯತೆ ಎಂದು ಹೋರಾಟ ಮಾಡುತ್ತಿದ್ದೇವೆ’ ಎಂದು ಶಿವಕುಮಾರ್ ಹೇಳಿದರು.