ಬೆಂಗಳೂರು: ತಮಿಳುನಾಡಿನಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಪಕ್ಷದ ವಿಜಯ್ ಅವರಿಗೆ ಸರ್ಕಾರ ರಚನೆಗೆ ಅವಕಾಶ ನೀಡದ ರಾಜ್ಯಪಾಲರ ನಡೆ ಸರಿಯಲ್ಲ. ಸರ್ಕಾರ ರಚನೆ ಮಾಡಿದ ನಂತರ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ಅವರಿಗೆ ಅಧಿಕಾರವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಟಿವಿಕೆಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕು. ಕರ್ನಾಟಕದಲ್ಲಿ 2018ರ ವಿಧಾನಸಭಾ ಚುನಾವಣೆಯ ನಂತರ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಅತಿ ಹೆಚ್ಚು ಸ್ಥಾನ ಪಡೆದ ಪಕ್ಷಗಳಿಗೆ ಸರ್ಕಾರ ರಚಿಸಲು ಈ ಹಿಂದೆಯೂ ಅನುಮತಿ ನೀಡಲಾಗಿತ್ತು. ರಾಷ್ಟ್ರಪತಿಗಳಾಗಿದ್ದ ನಾರಾಯಣನ್, ಅಬ್ದುಲ್ ಕಲಾಂ ಅವರೂ ಇಂತಹ ಮಾದರಿ ಅನುಸರಿಸಿದ್ದರು. ವಾಜಪೇಯಿ ಅವರಿಗೂ ಸರ್ಕಾರ ರಚಿಸಲು ಅನುಮತಿ ನೀಡಿ, ಸದನದಲ್ಲಿ ಬಹುಮತ ಸಾಬೀತಿಗೆ ಅವಕಾಶ ನೀಡಲಾಗಿತ್ತು’ ಎಂದರು.

ಮೊದಲು ಸರ್ಕಾರ ರಚನೆಗೆ ಆಹ್ವಾನಿಸಬೇಕು. ಬಹುಮತ ಸಾಬೀತಿಗೆ ಅವಕಾಶ ನೀಡಬೇಕು. ರಾಜ್ಯದ ಜನರ ಭಾವನೆಗಳಿಗೆ ಬೆಲೆ ಕೊಡಬೇಕು. ಇದು ಪ್ರಜಾಪ್ರಭುತ್ವ. ಒಂದು ಮತದಿಂದ ಬಹುಮತ ಬರಬಹುದು ಅಥವಾ ಕಳೆದುಕೊಳ್ಳಬಹುದು. ವಾಜಪೇಯಿ ಅವರಿಗೆ ಇದೇ ರೀತಿ ಆಗಲಿಲ್ಲವೇ? ಬಹುಮತ ಸಾಬೀತು ಮಾಡಲು ಸಾಧ್ಯವಾಗದಿದ್ದರೆ ಮುಂದಿನ ಆಯ್ಕೆಗೆ ಹೋಗಬಹುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.