ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಡಿಕೆಶಿ ಆಕ್ರೋಶ

ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಆಸ್ತಿಪಾಸ್ತಿ ನಾಶಕ್ಕೆ ಮುಂದಾದ ಗುಂಪನ್ನು ಚದುರಿಸಲು ಕ್ರಮ ಕೈಗೊಂಡ ಮೂವರು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಬಿಜೆಪಿ ಸರ್ಕಾರದ ನಡೆ ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಅವರು, ‘ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟೂರು ಅವರ ನಿಧನವು ಅತ್ಯಂತ ದುಃಖಕರ ವಿಷಯ ಆದರೆ ಅಂತ್ಯಸಂಸ್ಕಾರ ಮೆರವಣಿಗೆಯ ವೇಳೆ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಂಧಲೆ ನಾಚಿಕೆಗೇಡಿನ ಸಂಗತಿ’ ಎಂದು ತಿಳಿಸಿದ್ದಾರೆ.

‘ಬಿಜೆಪಿ ಪಕ್ಷವು ಈ ಮೂಲಕ ಗೂಂಡಾ ಸಂಸ್ಕೃತಿಗೆ ಒತ್ತು ನೀಡುತ್ತಿದೆ. ಸಾರ್ವಜನಿಕ ಆಸ್ತಿಗಳನ್ನು ನಾಶ ಮಾಡಲು ಮುಂದಾದವರನ್ನು ತಮ್ಮ ಕಾರ್ಯಕರ್ತರು ಎಂಬ ಕಾರಣಕ್ಕೆ ಬಿಜೆಪಿಯು ಬಂಧಿಸದೇ ಬಿಟ್ಟಿದೆಯೇ? ಪೊಲೀಸ್ ಅಧಿಕಾರಿಗಳ ವರ್ಗಾವಣೆಯ ಮೂಲಕ ಯಾವ ಸಂದೇಶವನ್ನು ಬಿಜೆಪಿ ನೀಡುತ್ತಿದೆ? ಮಾನ್ಯ ಗೃಹಸಚಿವರು ಇದಕ್ಕೆ ಉತ್ತರಿಸುವರೇ?’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT