ನಗರದಲ್ಲಿ ಎಂಟು ವರ್ಷಗಳಿಂದ ಸರಿಯಾಗಿ ಕಸ ಎತ್ತುವುದಕ್ಕೆ ಆಗುತ್ತಿಲ್ಲ. ಏನನ್ನಾದರೂ ಮಾಡಲು ಹೊರಟರೆ ಎಲ್ಲದಕ್ಕೂ ಕೋರ್ಟ್‌ನಿಂದ ತಡೆಯಾಜ್ಞೆ ತರುತ್ತಾರೆ. ಅನುಷ್ಠಾನಗೊಳಿಸಬೇಕಾದ ಯೋಜನೆಗಳ ಮೊತ್ತದಲ್ಲಿ ವರ್ಷವೊಂದಕ್ಕೆ ₹2 ಸಾವಿರ ಕೋಟಿ ನಷ್ಟವಾಗುತ್ತಿದೆ. ಹೀಗಾಗಿ, ವಕೀಲರು ಕೂಡಾ ಅಭಿವೃದ್ಧಿಯ ದೃಷ್ಟಿಯಿಂದ ಯೋಚನೆ ಮಾಡಬೇಕು. ಇಂತಹ ವಿಷಯಗಳನ್ನು ಹೊತ್ತು ತಮ್ಮ ಬಳಿ ಬರುವ ಕಕ್ಷಿದಾರರನ್ನು ತಿದ್ದಬೇಕು.