ಬೆಂಗಳೂರು: ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದ್ದಾರೆ.

ಮಾರ್ಚ್ 17ರಂದು ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಇದನ್ನು ಹಾಕಿರುವವರಿಗೂ ಉಪ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧ ಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಆದೇಶಿಸಿದ್ದಾರೆ.

‘ಬೆಂಗಳೂರು ನಗರದ ಸೌಂದರ್ಯ ವನ್ನು ಹಾಳು ಮಾಡಬಾರದು ಎಂದು ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಆದೇಶವನ್ನು ಪದೇ ಪದೇ ನಿರ್ಲಕ್ಷ ಮಾಡಲಾಗಿದೆ’ ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.

‘ಈ ಆದೇಶ ಉಲ್ಲಂಘಿಸಿರುವವರು ನಮ್ಮ ಪಕ್ಷದವರಾದರೂ ಸರಿ, ಬೇರೆ ಪಕ್ಷದವರಾದರೂ ಸರಿ, ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿಯವರ ಸೂಚನೆಯಂತೆ, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿ ಸಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಫ್ಲೆಕ್ಸ್ ಅಳವಡಿಸಿರುವವರ ಮೇಲೆ ₹5 ಲಕ್ಷ ದಂಡ ವಿಧಿಸುವ ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅರಮನೆ ಮೈದಾನ ಹಾಗೂ ನಗರದ ವಿವಿದೆಡೆ ನಾಳೆ ನಡೆಯಲಿರುವ ಯುವ ಸಂಕಲ್ಪ ಪದಗ್ರಹಣ ಸಮಾರಂಭಕ್ಕಾಗಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ. ಬಳ್ಳಾರಿ ರಸ್ತೆಯಲ್ಲಿ ಬೃಹತ್ ಗಾತ್ರದ 40 ಫ್ಲೆಕ್ಸ್ ಹಾಗೂ ಸಣ್ಣ ಗಾತ್ರದ 130ಕ್ಕೂ ಹೆಚ್ಚು ಫ್ಲೆಕ್ಸ್ ಗಳನ್ನು ತೆರವುಗೊಳಿಸ ಲಾಗಿದೆ. ಫ್ಲೆಕ್ಸ್ ತೆರವುಗೊಳಿಸಲು ಖರ್ಚಾಗುವ ಹಣ ಕೂಡಾ ವಸೂಲಿ ಮಾಡಲಾಗುವುದು. ಅಧಿಕಾರಿಗಳು ಖುದ್ದು ಸ್ಥಳದಲ್ಲಿದ್ದು, ಅನಧಿಕೃತ ಫ್ಲೆಕ್ಸ್ ಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.