ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಅಕ್ರಮ ಆಸ್ತಿ ಅರೋಪ ಅರ್ಜಿ: ವಿಚಾರಣೆ ಮುಂದಕ್ಕೆ

Published 13 ಫೆಬ್ರುವರಿ 2024, 0:30 IST
Last Updated 13 ಫೆಬ್ರುವರಿ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್‌ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಇದೇ 29ಕ್ಕೆ ನಿಗದಿಪಡಿಸಿದೆ.

ಈ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಲ್ಲಿಸಿರುವ ರಿಟ್‌ ಅರ್ಜಿ ಹಾಗೂ ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಿರುವುದನ್ನು ತಡೆಯಬೇಕು ಎಂದು ಕೋರಿ ಸಿಬಿಐ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ಮಧ್ಯಂತರ ಮತ್ತು ಮೂಲ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದರು. ಅಂತೆಯೇ, ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಿದ್ದರೆ ಸ್ಥಳೀಯವಾಗಿ ಹಿರಿಯ ವಕೀಲ ಉದಯ ಹೊಳ್ಳ, ಯತ್ನಾಳ ಪರ ವೆಂಕಟೇಶ್ ಪಿ.ದಳವಾಯಿ ಮತ್ತು ಲೋಕಾಯುಕ್ತ ಪರ ವೆಂಕಟೇಶ್ ಎಸ್‌.ಅರಬಟ್ಟಿ ಹಾಜರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT