ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಿದ್ದು, ಮೇ 31 ಅಥವಾ ಜೂನ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.

ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ, ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಹಲವು ಶಾಸಕರು ತೀವ್ರ ಲಾಬಿ ನಡೆಸುತ್ತಿರುವ ಬೆನ್ನಲ್ಲೇ, ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಇದರಲ್ಲಿ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವುದು ಬಹುತೇಕ ಖಚಿತವಿದೆ. ಸ್ವತಃ ಸಿದ್ದರಾಮಯ್ಯನವರೇ ಈ ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಮೇ 30) ಸಂಜೆ 4 ಗಂಟೆಗೆ ಸಿಎಲ್ಪಿ ಸಭೆ ನಡೆಯಲಿದ್ದು, ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಭಾಗವಹಿಸಲು ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಭಾನುವಾರ ಅಥವಾ ಸೋಮವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹಿರಿಯ ಕಾಂಗ್ರೆಸ್ ಶಾಸಕ ಎಚ್.ಕೆ ಪಾಟೀಲ್ ಹೇಳಿದ್ದಾರೆ.

ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸಂದರ್ಭದಲ್ಲಿ 8ರಿಂದ 10 ಸಚಿವರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದು, ಜೂನ್ 3 ಅಥವಾ ಜೂನ್ 5ರಂದು ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಕೂಡ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.