ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 10ರಿಂದ 14 ಶಾಸಕರು ಸಚಿವರಾಗಿ ಲೋಕಭವನದಲ್ಲಿ ಬುಧವಾರ (ಜೂನ್ 3) ಸಂಜೆ 4.05ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಎರಡು ದಿನ ನಡೆದ ಹಲವು ಸುತ್ತಿನ ಸಭೆಗಳ ಬಳಿಕ ಸಂಪುಟಕ್ಕೆ ಸೇರುವವರ ಪಟ್ಟಿಗೆ ಅಂತಿಮ ರೂಪ ನೀಡಲಾಯಿತು ಎಂದು ಗೊತ್ತಾಗಿದೆ.

ಸಚಿವರ ಪಟ್ಟಿ ಆಖೈರುಗೊಳಿಸಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಜತೆಗೆ ಸೋಮವಾರ ರಾತ್ರಿ ಪ್ರತ್ಯೇಕ ಸಭೆ ನಡೆಸಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವೇಣುಗೋಪಾಲ್, ಸುರ್ಜೇವಾಲಾ, ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಭಾಗಿಯಾದರು. ಎರಡು ಗಂಟೆಯ ಚರ್ಚೆಯ ಬಳಿಕವೂ ನಾಯಕರು ಒಮ್ಮತಕ್ಕೆ ಬರಲಿಲ್ಲ. ಸಭೆ ಅಪೂರ್ಣಗೊಂಡಿತು.

ಸಂಜೆ ಮತ್ತೊಂದು ಸುತ್ತಿನ ಸಭೆಯಲ್ಲಿ ಉಭಯ ನಾಯಕರ ಸಮ್ಮುಖದಲ್ಲಿ ಸಚಿವರ ಪಟ್ಟಿಗೆ ಅಂತಿಮ ಸ್ಪರ್ಶ ನೀಡಲಾಯಿತು. ಬಳಿಕ ರಾಜ್ಯದ ನಾಯಕರು ಬೆಂಗಳೂರಿಗೆ ನಿರ್ಗಮಿಸಿದರು. ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಿದ ಹೈಕಮಾಂಡ್, ಮೊದಲ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸುವವರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಬುಧವಾರ ಬೆಳಿಗ್ಗೆಯ ಹೊತ್ತಿಗೆ ಖಚಿತ ಮಾಹಿತಿಗಳು ಲಭ್ಯವಾಗಲಿವೆ ಎನ್ನಲಾಗಿದೆ.

ಸತೀಶ ಜಾರಕಿಹೊಳಿ ಹಾಗೂ ಈಶ್ವರ ಖಂಡ್ರೆ ಅವರ ಪೈಕಿ, ಒಬ್ಬರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವ ಬಗ್ಗೆ ಹೈಕಮಾಂಡ್ ನಾಯಕರು ಗಂಭೀರ ಚಿಂತನೆ ನಡೆಸಿದ್ದಾರೆ. ಕೆ.ಎಚ್. ಮುನಿಯಪ್ಪ ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದಾರೆ. ಆದರೆ, ಮಹಿಳಾ ಕೋಟಾದಲ್ಲಿ ಮುನಿಯಪ್ಪ ಅವರ ಪುತ್ರಿ ರೂಪಾ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆಯಾಗಿದೆ. ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬ ಬಗ್ಗೆ ಚರ್ಚಿಸಿ ತಿಳಿಸುವಂತೆ ಮುನಿಯಪ್ಪ ಅವರಿಗೆ ತಿಳಿಸಲಾಗಿದೆ.

ಯು.ಟಿ. ಖಾದರ್ ಸಚಿವರಾಗಲಿದ್ದಾರೆ. ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಹಿರಿಯ ಶಾಸಕರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಹಾಗೂ ಟಿ.ಬಿ. ಜಯಚಂದ್ರ ಹೆಸರು ಮುಂಚೂಣಿಗೆ ಬಂದಿದೆ. ಉಪಮುಖ್ಯಮಂತ್ರಿಯನ್ನಾಗಿ ಜಿ. ಪರಮೇಶ್ವರ ಅವರನ್ನು ನೇಮಿಸಬೇಕು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದರು ಎಂದು ತಿಳಿದುಬಂದಿದೆ.

ಎಂ.ಸಿ. ವೇಣುಗೋಪಾಲ್ ಹೆಸರು ಮುನ್ನೆಲೆಗೆ: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಅಭ್ಯರ್ಥಿಗಳ ಬಗ್ಗೆಯೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೊತೆ ಹೈಕಮಾಂಡ್ ನಾಯಕರು ಚರ್ಚೆ ನಡೆಸಿದರು. ಅಭ್ಯರ್ಥಿಗಳ ಪಟ್ಟಿಯನ್ನು ಇದೇ 5 ರಂದು ಬಿಡುಗಡೆ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದೆ. ರಾಜ್ಯಸಭಾ ಚುನಾವಣೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಸಿ. ವೇಣುಗೋಪಾಲ್ ಅವರ ಹೆಸರು ಮುನ್ನೆಲೆಗೆ ಬಂದಿದೆ. ಸವಿತಾ ಸಮಾಜಕ್ಕೆ ಸೇರಿದ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದರೆ ಅತೀ ಹಿಂದುಳಿದ ಸಮಾಜಕ್ಕೆ ಪ್ರಾತಿನಿಧ್ಯ ನೀಡಿದಂತಾಗಿದೆ ಎಂದು ರಾಜ್ಯದ ಕೆಲವು ಮುಖಂಡರು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ.

ಕಾಂಗ್ರೆಸ್ಗೆ ಲಭ್ಯವಾಗುವ ಮೂರು ಸ್ಥಾನಗಳ ಪೈಕಿ ಮಲ್ಲಿಕಾರ್ಜುನ ಖರ್ಗೆ ಹಾಗೂ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ರೆಡ್ಡಿ ಅವರು ಹೆಸರು ಬಹುತೇಕ ಅಂತಿಮಗೊಂಡಿದೆ.

ಪೂರ್ವಾಭಿಮುಖವಾಗಿ ಪ್ರತಿಜ್ಞಾವಿಧಿ ಸ್ವೀಕಾರ

ಪ್ರಮಾಣವಚನಕ್ಕೆ ಲೋಕಭವನ ಸಿಂಗಾರಗೊಂಡಿದೆ. ಗಾಜಿನ ಮನೆ, ಉದ್ಯಾನ, ಹುಲ್ಲುಹಾಸಿನಲ್ಲಿ 2,500ಕ್ಕೂ ಹೆಚ್ಚು ಆಸನಗಳನ್ನು ಅಳವಡಿಸಲಾಗಿದೆ. ಇದೇ ಮೊದಲ ಬಾರಿಗೆ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಲಿದೆ. ಈವರೆಗೆ (ಹಿಂದಿನ ರಾಜಭವನ) ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಗಳು ಪಶ್ಚಿಮಾಭಿಮುಖವಾಗಿ ಇರುವ ವೇದಿಕೆಯಲ್ಲಿ ನಡೆದಿದ್ದವು. ಪಶ್ಚಿಮಾಭಿಮುಖವಾಗಿ ಇರುವ ವೇದಿಕೆಯಲ್ಲಿ ಸರ್ವ ಧರ್ಮ ಸಮುದಾಯಗಳ ಧರ್ಮ ಗುರುಗಳಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.

ಸಂಪುಟ ಸೇರಲಿರುವ ಸಚಿವರ ಕುಟುಂಬದವರಿಗೆ ವೇದಿಕೆಯ ಮೊದಲ ಸಾಲಿನಲ್ಲಿ, ನಂತರದ ಸಾಲುಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು, ಲೋಕಾಯುಕ್ತರು, ವಿವಿಧ ಕ್ಷೇತ್ರಗಳ ಗಣ್ಯರಿಗೆ ವ್ಯವಸ್ಥೆ ಮಾಡಲಾಗಿದೆ. ಲೋಕಭವನದ ಒಳಗೆ ಆರು ಎಲ್ಇಡಿ ಪರದೆಗಳನ್ನು ಅಳವಡಿಸಲಾಗಿದೆ.

ಸರ್ವಜಾತಿ–ಧರ್ಮ ಗುರುಗಳಿಗೆ ಆಮಂತ್ರಣ

ಶಿವಕುಮಾರ್ ನೇತೃತ್ವದ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ ಹಾಗೂ ವಿವಿಧ ಸಮುದಾಯಗಳ ಧರ್ಮಗುರುಗಳಿಗೆ ಆಮಂತ್ರಣ ನೀಡಲಾಗಿದೆ.

ಇವರ ಜತೆಗೆ, ಶಿವಕುಮಾರ್ ಕಲಿತ ಕನಕಪುರ ದೊಡ್ಡಾಲಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಪೌರಕಾರ್ಮಿಕರು, ರೈತ ಮುಖಂಡರು, ದಲಿತ ಸಂಘಟನೆ ಮುಖಂಡರು, ಹಿಂದುಳಿದ ವರ್ಗಗಳ ಮುಖಂಡರು, ಸ್ತ್ರೀ ಶಕ್ತಿ ಸಂಘಗಳ ಪ್ರತಿನಿಧಿಗಳು, ಮಹಿಳಾ ಮುಖಂಡರು, ಉದ್ಯಮಿಗಳು, ವಿವಿಧ ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದ ಪ್ರಮುಖರಿಗೂ ಆಹ್ವಾನ ನೀಡಲಾಗಿದೆ.

ಕಾರ್ಯಕ್ರಮಕ್ಕೆ ಯಾರೆಲ್ಲ?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಂಸದರು ಕಾರ್ಯಕ್ರಮಕ್ಕೆ ಬರಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.