ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ನೂತನ ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ.

ಇಂದು ಸಂಜೆ ನಡೆದ ಸಭೆಯಲ್ಲಿ ಡಿಕೆಶಿ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇದರ ಬೆನ್ನಲ್ಲೇ, ಲೋಕಭವನಕ್ಕೆ ತೆರಳಿದ ಡಿ.ಕೆ.ಶಿವಕುಮಾರ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿ.ಪರಮೇಶ್ವರ, ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ, ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ. ಚಂದ್ರಶೇಖರ್ ತಿಳಿಸಿದ್ದಾರೆ.

ಲೋಕಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಬುಧವಾರ ಸಂಜೆ 5.15ರ ಗೋಧೂಳಿ ಶುಭಲಗ್ನದಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣ ಸ್ವೀಕರಿಸಲಿದ್ದಾರೆ.

ಈ ಮೊದಲು ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿರುವ ಭವ್ಯ ಮೆಟ್ಟಿಲುಗಳ ಮುಂದೆ ಇಲ್ಲವೇ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಬೇಕೆಂದು ತೀರ್ಮಾನಿಸಲಾಗಿತ್ತು. ಸಂಚಾರದಟ್ಟಣೆ ಹಿನ್ನೆಲೆಯಲ್ಲಿ ಲೋಕಭವನದಲ್ಲಿ ಸ್ಥಳವನ್ನು ನಿಗದಿಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.