ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಚಿಕಿತ್ಸೆ ಪಡೆಯುತ್ತಾರೆ.
ಬೊಮ್ಮಾಯಿ ಅವರನ್ನು ಭೇಟಿಯಾಗಿರುವ ಬಗ್ಗೆ ಡಿ.ಕೆ ಶಿವಕುಮಾರ್ ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
‘ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಭೇಟಿಯಾಗಿ ಅವರ ಯೋಗಕ್ಷೇಮ ವಿಚಾರಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಮಂಡಿ ಶಸ್ತ್ರಚಿಕಿತ್ಸೆಗಾಗಿ ಬೊಮ್ಮಾಯಿ ಅವರು ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ಹೃದಯದಲ್ಲಿ ಬ್ಲಾಕೇಜ್ ಇರುವುದು ಕಂಡುಬಂದಿತ್ತು. ಬಳಿಕ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.