ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸುವುದಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಬಿಜೆಪಿ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಎಚ್.ಡಿ.ದೇವೇಗೌಡ, ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಡಿಕೆಶಿ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು (ಬುಧವಾರ) ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.

ಡಿಕೆಶಿ ಅವರೊಂದಿಗೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಂಸದರು ಕಾರ್ಯಕ್ರಮಕ್ಕೆ ಬರಲಿದ್ದಾರೆ.
.ಶುಭಗಳಿಗೆ ಬರಬೇಕಾದ್ರೆ ಯಾರೂ ಯಾರನ್ನೂ ತಡೆಯಲಿಕ್ಕೆ ಸಾಧ್ಯವಿಲ್ಲ ಎಂದಿದ್ದ ಡಿಕೆ.ಯಶಸ್ಸು ಸಿಗಲು ಧರ್ಮರಾಯ, ಕರ್ಣ, ಅರ್ಜುನ,ಕೃಷ್ಣನ ತಂತ್ರ ಅನುಸರಿಸಬೇಕು ಎಂದಿದ್ದ DK.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.