ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸಚಿವರು ಹೇಳಿಕೆ ನೀಡಿದ ಬೆನ್ನಲ್ಲೇ, ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಬಳಿ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು.

ಗುರುವಾರ ಬೆಳಿಗ್ಗೆಯಿಂದಲೇ ಶಿವಕುಮಾರ್ ಅವರ ಮನೆಯ ಬಳಿ ಸೇರಿದ್ದ ಅಭಿಮಾನಿಗಳು, ಮಧ್ಯಾಹ್ನದ ವೇಳೆಗೆ ಪರಸ್ಪರ ಸಿಹಿ ಹಂಚಿದರು.

‘ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜೈ’ ಎಂದು ಘೋಷಣೆ ಕೂಗಿದರು. ‘40 ವರ್ಷಕ್ಕೂ ಹೆಚ್ಚು ಕಾಲದಿಂದ ಪಕ್ಷಕ್ಕಾಗಿ ನಿಷ್ಠರಾಗಿ ದುಡಿದಿದ್ದಾರೆ. ಅವರಿಗೆ ಈಗ ಒಳ್ಳೆಯ ಕಾಲ ಬರುತ್ತಿದೆ. ಪಕ್ಷಕ್ಕೂ ಒಳ್ಳೆಯದಾಗಲಿದೆ’ ಎಂದು ಅಭಿಮಾನಿಗಳು ಸಂಭ್ರಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.