ಬೆಂಗಳೂರು: ‘ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಕುರಿತು ಬಹಿರಂಗ ಚರ್ಚೆ ಮಾಡುವುದಿಲ್ಲ. ಜ.16ರಂದು ದೆಹಲಿಗೆ ತೆರಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ. ಕೆಪಿಸಿಸಿ ಅಧ್ಯಕ್ಷನಾಗಿ ಶಿಷ್ಟಾಚಾರದ ಪ್ರಕಾರ ಅವರನ್ನು ಸ್ವಾಗತಿಸಲು ಭೇಟಿ ಮಾಡಿದ್ದೆ. ಇಂತಹ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

‘ರಾಹುಲ್ ಭೇಟಿಯ ಕುರಿತು ನಾನು ಯಾವ ಸಂದೇಶವನ್ನೂ ನೀಡಿಲ್ಲ. ಕೆಲವರು ಇಚ್ಛೆ ಬಂದಂತೆ ಗೊಂದಲ ಸೃಷ್ಟಿಸುತ್ತಾರೆ. ಪಕ್ಷ ತೆಗೆದುಕೊಂಡ ವಿಚಾರವನ್ನು ಅವರ ಗಮನಕ್ಕೆ ತಂದಿದ್ದೇವೆ. ಉತ್ತಮ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ’ ಎಂದರು.

‘ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ’ ಎಂಬ ಎಕ್ಸ್ನ ತಮ್ಮ ಹೇಳಿಕೆ ಹೊಸದಲ್ಲ. ಒಕ್ಕಲಿಗ ಉದ್ಯಮಿ ಕಾರ್ಯಕ್ರಮಕ್ಕೆ ಹೋಗಿದ್ದಾಗ ಅಲ್ಲಿದ್ದ ಉದ್ಯಮಿಗಳಿಗೆ ಅನುಭವದ ಮಾತು ಹೇಳಿದ್ದೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.