ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ಗೆಲ್ಲುವ ಮಾನದಂಡ ಆಧರಿಸಿ ಸಮರ್ಥ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಮುಸ್ಲಿಂ ಸಮುದಾಯದ ಮುಖಂಡರಿಗೆ ವಿಧಾನಪರಿಷತ್ ಹಾಗೂ ನಿಗಮ, ಮಂಡಳಿ ನೇಮಕಾತಿಯಲ್ಲಿ ಒತ್ತು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶ್ವಾಸನೆ ನೀಡಿದರು.

‘ಚುನಾವಣೆಗೂ ಮುನ್ನ ನಡೆದ ಸಮೀಕ್ಷೆಯಲ್ಲಿ ಸಮರ್ಥ ಶಾಮನೂರು ಪರವಾದ ಒಲವು ವ್ಯಕ್ತವಾಗಿದೆ. ಎಲ್ಲ ರೀತಿಯ ಲೆಕ್ಕಾಚಾರ ಹಾಕಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗನಿಗೆ ಅವಕಾಶ ನೀಡಲಾಗಿದೆ. ಪಕ್ಷದ ವರಿಷ್ಠರು, ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೇಳುವ ಹಕ್ಕು ಪಕ್ಷದ ಎಲ್ಲ ಕಾರ್ಯಕರ್ತರಿಗೂ ಇದೆ. ದಕ್ಷಿಣ ಕ್ಷೇತ್ರದ ಟಿಕೆಟ್ಗೆ ಮುಸ್ಲಿಂ ಸಮುದಾಯ ಬೇಡಿಕೆ ಇಟ್ಟಿದ್ದು ತಪ್ಪಲ್ಲ. ಅಬ್ದುಲ್ ಜಬ್ಬಾರ್ ಮೂರು ಬಾರಿ ವಿಧಾನಪರಿಷತ್ ಸದಸ್ಯರಾಗಲು ಪಕ್ಷ ಅವಕಾಶ ಮಾಡಿಕೊಟ್ಟಿದೆ. ಸಾದಿಕ್ ಪೈಲ್ವಾನ್ ಅವರನ್ನು ವಿಶ್ವಾಸಕ್ಕೆ ಪಡೆಯುತ್ತೇವೆ. ಚುನಾವಣಾ ಪ್ರಚಾರಕ್ಕೆ ಬಂದಾಗ ಮತ್ತೊಂದು ಸುತ್ತಿನ ಮಾತುಕತೆ ನಡೆಸುತ್ತೇವೆ’ ಎಂದು ಹೇಳಿದರು.

‘ಶಾಮನೂರು ಶಿವಂಶಕರಪ್ಪ ಅವರು ದಾವಣಗೆರೆ ಜಿಲ್ಲೆಯನ್ನು ಚೆನ್ನಾಗಿ ಅಭಿವೃದ್ಧಿ ಮಾಡಿದ್ದಾರೆ. ಬೆಂಗಳೂರು ನಗರಕ್ಕಿಂತಲೂ ಯೋಜನಾಬದ್ಧವಾಗಿ ನಿರ್ಮಿಸಿದ್ದಾರೆ. ಕೈಗಾರಿಕಾ ನಗರವನ್ನು ಶಿಕ್ಷಣ ಕಾಶಿಯಾಗಿ ರೂಪಿಸಿದ್ದಾರೆ. ವಿದೇಶಿ ವಿದ್ಯಾರ್ಥಿಗಳು ಕೂಡ ವ್ಯಾಸಂಗಕ್ಕೆ ದಾವಣಗೆರೆಗೆ ಬರುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಿ ಅನನ್ಯ ಸೇವೆ ಸಲ್ಲಿಸಿದ್ದಾರೆ’ ಎಂದು ಕೊಂಡಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.