ಬೆಂಗಳೂರು: ‘ಕಾಂಗ್ರೆಸ್ ಪಕ್ಷದಲ್ಲಿ ಕಿತ್ತಾಟ ಇಲ್ಲ. ಕಿತ್ತಾಟ ಇರುವುದು ಬಿಜೆಪಿಯಲ್ಲಿ. ಹೀಗಾಗಿ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲು ಬಿಜೆಪಿಯವರಿಗೆ ಆಗಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
‘ಕಾಂಗ್ರೆಸ್ ನಾಯಕರು ಕಚ್ಚಾಡುತ್ತಿದ್ದಾರೆ’ ಎಂಬ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಮ್ಮಲ್ಲಿ ಯಾವುದೇ ಜಗಳ ಇಲ್ಲ. ಬಿಜೆಪಿ ಮುಖಂಡರು ತಮ್ಮ ವೈಫಲ್ಯ ಮುಚ್ಚಿಡಲು ಈ ರೀತಿ ಮಾತನಾಡುತ್ತಾರೆ. ನಮ್ಮ ಶಾಸಕರಿಗೆ ಚಾಕೊಲೇಟ್ ನೀಡಲು ಪ್ರಯತ್ನಿಸುತ್ತಿದ್ದಾರೆ’ ಎಂದರು.
‘ಆಪರೇಷನ್ ಕಮಲ ಮಾಡುತ್ತಿಲ್ಲ, ಬೇಕಾದರೆ ಅವರೇ ತನಿಖೆ ಮಾಡಿಸಲಿ‘ ಎಂಬ ಯಡಿಯೂರಪ್ಪ ಹೇಳಿಕೆ ಬಗ್ಗೆ ಕೇಳಿದಾಗ, ‘ಯಡಿಯೂರಪ್ಪ ಅವರ ಸಲಹೆ ಗಮನದಲ್ಲಿ ಇಟ್ಟುಕೊಳ್ಳುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.