ಬೆಂಗಳೂರು: ಡಾ. ಜಿ. ಪರಮೇಶ್ವರ ಅವರು ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ.

ಡಿ.ಕೆ.ಶಿವಕುಮಾರ್ ಅವರೊಂದಿಗೆ ಪರಮೇಶ್ವರ ಸೇರಿದಂತೆ 13 ಶಾಸಕರು ಸಚಿವರಾಗಿ ಇಂದು (ಜೂನ್ 3) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ, ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ್ದಾರೆ. ಪ್ರತಿಯಾಗಿ, ಇಬ್ಬರೂ ನಾಯಕರಿಗೆ ಸಿದ್ದರಾಮಯ್ಯ ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

‘ಇಂದು ಸಂಜೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಪರಮೇಶ್ವರ ಅವರು ನನ್ನನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಇಬ್ಬರೂ ನಾಯಕರಿಗೆ ಅಭಿನಂದಿಸಿ, ಶುಭ ಹಾರೈಸಿದೆ’ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ನೂತನ ಸರ್ಕಾರದಲ್ಲಿ ನಾಲ್ವರು ಡಿಸಿಎಂ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.