1962 ಮೇ 15: ಬೆಂಗಳೂರು ದಕ್ಷಿಣ ಜಿಲ್ಲೆತಯ ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ಅವರ ಮೊದಲ ಪುತ್ರನಾಗಿ ಜನನ
.ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಜೂನ್ 3ಕ್ಕೆ: ಕಾಂಗ್ರೆಸ್ ಅಧಿಕೃತ ಘೋಷಣೆ.
1980–81: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘದ (ಎನ್ಎಸ್ಯುಐ) ಬೆಂಗಳೂರು ಘಟಕದ ಅಧ್ಯಕ್ಷನಾಗಿ ರಾಜಕೀಯ ಪ್ರವೇಶ. ವಿದ್ಯಾರ್ಥಿ ನಾಯಕನಾಗಿ ರಾಜಕೀಯ ಜೀವನ ಆರಂಭ

1985: ತಮ್ಮ 23ನೇ ವಯಸ್ಸಿನಲ್ಲಿಯೇ ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ, ಪ್ರಭಾವಿ ನಾಯಕ ಎಚ್.ಡಿ.ದೇವೇಗೌಡ ವಿರುದ್ಧ ಸ್ಪರ್ಧೆ. 15,000 ಮತಗಳ ಅಂತರದಿಂದ ಸೋಲು. ದೇವೇಗೌಡ ಅವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ ಕಾರಣಕ್ಕೆ, ಹಿರಿಯ ನಾಯಕರ ಗಮನ ಸೆಳೆದ ಯುವ ರಾಜಕಾರಣಿ

1987: ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆ

1989: ಸಾತನೂರು ಕ್ಷೇತ್ರದಿಂದ ಸ್ಪರ್ಧೆ. ಜನತಾ ಪಕ್ಷದ ಅಭ್ಯರ್ಥಿ ವಿರುದ್ಧ 30,945 ಮತಗಳ ಅಂತರದಿಂದ ಗೆಲುವು. ಮೊದಲ ಬಾರಿಗೆ ಶಾಸಕನಾಗಿ ವಿಧಾನಸಭೆ ಪ್ರವೇಶ

1991–92: ಅಂದಿನ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸಂಪುಟದಲ್ಲಿ ಬಂದಿಖಾನೆ ಸಚಿವ. 30ನೇ ವಯಸ್ಸಿಗೇ ಸಚಿವರಾದ ಹೆಗ್ಗಳಿಕೆ
.ಮಲ್ಲಿಕಾರ್ಜುನ ಖರ್ಗೆ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್.
1994: ಕಾಂಗ್ರೆಸ್ನಿಂದ ಟಿಕೆಟ್ ನಿರಾಕರಣೆ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವು

1999: ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ. ಭಾರಿ ಅಂತರದಿಂದ ಕುಮಾರಸ್ವಾಮಿ ವಿರುದ್ಧ ಗೆಲುವು. ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ನಗರಾಭಿವೃದ್ಧಿ ಮತ್ತು ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ

2004: ಶಾಸಕನಾಗಿ ಚುನಾಯಿತರಾದರೂ ಕಾಂಗ್ರೆಸ್ಗೆ ಅಲ್ಪಮತ. ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ. ರಾಜಕೀಯ ಕಾರಣಗಳಿಗಾಗಿ ಸಚಿವ ಸಂಪುಟದಿಂದ ಹೊರಗುಳಿಯಬೇಕಾದ ಸ್ಥಿತಿ. ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡ ವಿರುದ್ಧ ಪತ್ರಕರ್ತೆ ತೇಜಸ್ವಿನಿಗೌಡ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿ, ಗೆಲ್ಲಿಸಿದ ಶ್ರೇಯ

2008: ಕನಕಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ

2013–18: ಕನಕಪುರ ಕ್ಷೇತ್ರದಿಂದ ಗೆದ್ದರೂ, ಸಚಿವ ಸಂಪುಟದಲ್ಲಿ ಸಿಗದ ಸ್ಥಾನ. 2014ರಲ್ಲಿ ಇಂಧನ ಸಚಿವರಾಗಿ ಅಧಿಕಾರ ಸ್ವೀಕಾರ
.ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲು ಅಡ್ಡಿ ಆತಂಕವಿಲ್ಲ: ಸಚಿವ ಎಂ.ಸಿ.ಸುಧಾಕರ್.
2017: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಶಿವಕುಮಾರ್ ಮತ್ತು ಆಪ್ತರ ಮನೆಗಳ ಮೇಲೆ ದಾಳಿ. ಆದಾಯ ತೆರಿಗೆ ಇಲಾಖೆ ದಾಳಿಯ ಆಧಾರದಲ್ಲಿ ಜಾರಿ ನಿರ್ದೇಶನಾಲಯದಿಂದಲೂ ಪ್ರಕರಣ ದಾಖಲು, ವಿಚಾರಣೆ

2018–19: ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಬೃಹತ್ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಣೆ

2019: ಸೆಪ್ಟೆಂಬರ್ 3ರಂದು ಹಣ ಅಕ್ರಮ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನ. ದೆಹಲಿಯ ತಿಹಾರ್ ಜೈಲಿನಲ್ಲಿ 50 ದಿನ ಸೆರೆವಾಸ. ಅಕ್ಟೋಬರ್ 23ರಂದು ಜಾಮೀನಿನ ಮೇಲೆ ಬಿಡುಗಡೆ

2020: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ. ಪಕ್ಷ ಸಂಘಟನೆ, ಚುನಾವಣಾ ತಯಾರಿ

2023: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ವದ ಪಾತ್ರ. ಮುಖ್ಯಮಂತ್ರಿ ಹುದ್ದೆಗಾಗಿ ಪಟ್ಟು. ಉಪ ಮುಖ್ಯಮಂತ್ರಿ ಹುದ್ದೆ, ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
.ಪಕ್ಷದ ಸಾಮಾನ್ಯ ಕಾರ್ಯಕರ್ತನಿಂದ ಮುಖ್ಯಮಂತ್ರಿವರೆಗೆ: ಡಿ.ಕೆ. ಶಿವಕುಮಾರ್ ಯಶೋಗಾಥೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.