ಬೆಂಗಳೂರು: ‘ನಾನು ಹಾಗೂ ಸಚಿವರಾದ ಸತೀಶ ಜಾರಕಿಹೊಳಿ ಅವರು ಸೇರಿ ಈ ಅಧಿವೇಶನದ ವೇಳೆ ಮುಖ್ಯಮಂತ್ರಿಯವರ ಜೊತೆ ಗುತ್ತಿಗೆದಾರರ ಸಭೆ ಮಾಡಿಸುತ್ತೇವೆ. ನಿಮ್ಮ ಸಮಸ್ಯೆ ಬಗೆಹರಿಸಲು ನಾವೆಲ್ಲ ಸೇರಿ ಪರಿಹಾರ ಕಂಡುಕೊಳ್ಳಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

₹37 ಸಾವಿರ ಕೋಟಿ ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಗುತ್ತಿಗೆದಾರರ ಸಂಘದವರನ್ನು ಶುಕ್ರವಾರ ಭೇಟಿ ಮಾಡಿ, ಅವರು ಈ ಭರವಸೆ ನೀಡಿದರು.

‘ನನ್ನ ಇಲಾಖೆಯಲ್ಲಿ ₹13 ಸಾವಿರ ಕೋಟಿ, ಬೋಸರಾಜು ಅವರ ಇಲಾಖೆಯಲ್ಲಿ ₹3 ಸಾವಿರ ಕೋಟಿ ಸೇರಿದಂತೆ ಸುಮಾರು ₹37 ಸಾವಿರ ಕೋಟಿ ಬಿಲ್ ಬಾಕಿ ಇದೆ. ನಿಮ್ಮ ನೋವು ನಮಗೆ ಗೊತ್ತಿದೆ. ನಾನು ಚುನಾವಣೆಗೂ ಆರು ತಿಂಗಳು ಮುಂಚಿತವಾಗಿ ಹೇಳಿದ್ದೆ. ಇಲಾಖೆಗಳಲ್ಲಿ ಹಣವಿಲ್ಲದೆ ಯಾವುದೇ ಗುತ್ತಿಗೆ ಕಾಮಗಾರಿ ತಗೆದುಕೊಳ್ಳಬೇಡಿ ಎಂದು ಎಚ್ಚರಿಸಿದ್ದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಹಣ ಇರಲಿ, ಬಿಡಲಿ, ಕಾಮಗಾರಿ ಕೊಟ್ಟಿದ್ದೇ ಕೊಟ್ಟದ್ದು. ನೀವು ಕೆಲಸ ತೆಗೆದುಕೊಂಡು ನಮ್ಮ ಎದೆ ಮೇಲೆ ಕೂತಿದ್ದೀರಿ. ಇದಕ್ಕೆ ಒಂದು ರೂಪ ನೀಡಬೇಕಿದೆ. ಇದಕ್ಕೆ ಸುಮಾರು ₹50 ಸಾವಿರ ಕೋಟಿಯಷ್ಟು ಬಾಂಡ್ ಅಥವಾ ಇತರೆ ಮಾರ್ಗ ಹುಡುಕಬೇಕು. ಆಗ ಮಾತ್ರ ಈ ಸಮಸ್ಯೆ ಬಗೆಹರಿಯಲಿದೆ’ ಎಂದರು.

‘ಬೆಂಗಳೂರು ಅಭಿವೃದ್ಧಿಗೆ ಬಿಜೆಪಿಯವರು ಹಣ ಕೊಟ್ಟಿಲ್ಲ. ಅವರು ಮಾಡಲಿ ಬಿಡಲಿ, ನಮ್ಮ ಕರ್ತವ್ಯ ನಾವು ಮಾಡಬೇಕು. ನೀವು ನಮ್ಮನ್ನು ಬಿಡಂಗಿಲ್ಲ, ನಾವು ನಿಮ್ಮನ್ನು ಬಿಡಂಗಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದನ್ನು ಬಿಡಿ. ನೀವು ನಮ್ಮ ಬಳಿ ಬಂದು ಚರ್ಚೆ ಮಾಡಿ, ಯಾವ ರೀತಿ ಹಣ ಹೊಂದಿಸಿ ಸಮಸ್ಯೆ ಬಗೆಹರಿಸಬೇಕು ನೋಡೋಣ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ನಾನು, ಸತೀಶ ಜಾರಕಿಹೊಳಿ ಹಾಗೂ ಬೋಸರಾಜು ಅವರು ಬಂದಿದ್ದೇವೆ’ ಎಂದು ತಿಳಿಸಿದರು.

ಪರಿಷತ್ಗೆ ಗುತ್ತಿಗೆದಾರರಿಗೆ ಪ್ರಾತಿನಿಧ್ಯ: ‘ಗುತ್ತಿಗೆದಾರರು ತಮ್ಮ ಬದುಕಿಗೆ ಮಾತ್ರವಲ್ಲ ರಾಜ್ಯದ ಬದುಕಿಗೆ ಸಹಾಯ ಮಾಡುತ್ತಿದ್ದೀರಿ. ನಮ್ಮ ಸರ್ಕಾರ ತಂದಿದ್ದೀರಿ ಎಂಬ ಅರಿವು ನಮಗಿದೆ. ನಿಮಗೆ ಹಣ ಪಾವತಿ ಮಾಡಬಾರದು ಎಂಬುದು ನಮ್ಮ ಉದ್ದೇಶವಲ್ಲ. ನಿಮ್ಮ ಅಧ್ಯಕ್ಷರಾದ ಆರ್. ಮಂಜುನಾಥ್ ಅವರ ನ್ಯಾಯ ನಾನು ನೋಡುತ್ತಲೇ ಇದ್ದೇನೆ. ಅವರಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಒಂದು ಜಾಗ ಕೊಡಿಸಬೇಕು. ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರ, ಸಿನಿಮಾ, ಕಲೆ ಸೇರಿದಂತೆ ಇತರೆ ವಲಯದವರಿಗೆ ಒಂದು ಪ್ರಾತಿನಿಧ್ಯ ನೀಡಿದಂತೆ ಗುತ್ತಿಗೆದಾರರಿಗೆ ಒಂದು ಜಾಗ ಕೊಡಿಸಬೇಕಿದೆ. ಆಗ ನಿಮ್ಮ ಸಮಸ್ಯೆ ಬಗೆಹರಿಯಬಹುದು. ಇದಕ್ಕೆ ಒಂದು ದಾರಿ ಹುಡುಕಬೇಕಿದೆ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.