ನವದೆಹಲಿ: ಬೆಂಗಳೂರಿನ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ರಕ್ಷಣಾ ಇಲಾಖೆ ವಿಧಿಸಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳು ಪ್ರಗತಿಗೆ ಅಡ್ಡಿಯಾಗಿದ್ದು, ಈ ನಿರ್ಬಂಧಗಳನ್ನು ಸಡಿಲಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು.

ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಶುಕ್ರವಾರ ಭೇಟಿ ಮಾಡಿದ ಶಿವಕುಮಾರ್ ಮನವಿ ಪತ್ರ ಸಲ್ಲಿಸಿದರು.

‘ವಿಮಾನ ನಿಲ್ದಾಣಗಳ 20 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ನಿರಾಕ್ಷೇಪಣಾ ಪತ್ರ ನೀಡುವಾಗ ವಿಮಾನ ನಿಲ್ದಾಣದ ಅಧಿಕಾರಿಗಳು ವಿಪರೀತ ನಿರ್ಬಂಧಗಳನ್ನು ವಿಧಿಸುತ್ತಿದ್ದಾರೆ. ಬೆಂಗಳೂರು ವಿಶ್ವದ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಎಚ್ಎಎಲ್ ವಿಮಾನ ನಿಲ್ದಾಣ ಬೆಂಗಳೂರಿನ ಹೃದಯ ಭಾಗದಲ್ಲಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಬೇಡಿಕೆ ಇದೆ. ಆದರೆ, ಹೆಚ್ಚುವರಿಯಾಗಿ ವಿಧಿಸಲಾಗಿರುವ ನಿರ್ಬಂಧಗಳು ಈ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಅಡ್ಡಿಯಾಗಿವೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

‘ಈ ವಿಚಾರವಾಗಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಹಾಗೂ ರಕ್ಷಣಾ ಕಾರ್ಯದರ್ಶಿಗಳಿಗೆ ಪತ್ರಗಳನ್ನು ಬರೆಯಲಾಗಿದೆ. ವಿಮಾನ ಸುರಕ್ಷತೆ ಹಾಗೂ ನಗರದ ಅಭಿವೃದ್ಧಿ ಎರಡರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪರಿಶೀಲನೆ ನಡೆಸಿ, ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

‘ಎಚ್ಎಎಲ್ ಹಾಗೂ ಯಲಹಂಕ ವಾಯುನೆಲೆಯ ಸುತ್ತಮುತ್ತಲ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಮಾಡಲು ವಿಮಾನ ನಿಲ್ದಾಣ ಅಧಿಕಾರಿಗಳಿಂದ ನಿರಾಕ್ಷೇಪಣ ಪತ್ರ ಪಡೆಯಬೇಕಾಗಿದೆ. ವಿಮಾನ ನಿಲ್ದಾಣದ ಸುತ್ತಮುತ್ತಲ 15 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡಗಳ ಎತ್ತರದ ಮಿತಿಯನ್ನು 150 ಮೀಟರ್ಗೆ ನಿಗದಿಪಡಿಸಲಾಗಿದೆ ಎಂದು ಜಿ.ಎಸ್.ಆರ್ 751 (ಇ) ನಿಯಮದಲ್ಲಿ ತಿಳಿಸಲಾಗಿದೆ. ಆದರೆ, ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳು ಈ ವಿಪರೀತ ನಿರ್ಬಂಧ ಹೇರುವುದರ ಜತೆಗೆ 150 ಮೀ. ಎತ್ತರದ ಮಿತಿಯನ್ನು 15 ಕಿ.ಮೀ ಮೀರಿ 20 ಕಿ.ಮೀ ವರೆಗೂ ವಿಸ್ತರಿಸಿವೆ. ಈ ನಿರ್ಬಂಧಗಳು ಬೆಂಗಳೂರು ನಗರದ ಪ್ರಗತಿಗೆ ಮಾರಕವಾಗಿವೆ‘ ಎಂದು ಅವರು ಗಮನ ಸೆಳೆದಿದ್ದಾರೆ.

ಸಿಂಗಪುರ, ಡಲ್ಲಾಸ್, ಲಂಡನ್ ಹಾಗೂ ದುಬೈ ಸೇರಿದಂತೆ ಅನೇಕ ನಗರಗಳಲ್ಲಿ ವಿಮಾನ ನಿಲ್ದಾಣಗಳನ್ನು ಕಚೇರಿ, ಮನರಂಜನೆ ಸೇರಿದಂತೆ ವಿವಿದೋದ್ದೇಶಗಳಿಗೆ ಬಳಸಲಾಗುತ್ತಿದೆ. ಈ ನಗರಗಳಲ್ಲಿ ವಿಮಾನ ನಿಲ್ದಾಣಗಳು ಸಂಚಾರ ಉದ್ದೇಶಕ್ಕೆ ಮಾತ್ರವಲ್ಲದೇ ಉದ್ಯೋಗದ ಕೇಂದ್ರವಾಗಿ ನಗರ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿವೆ. ಹೀಗಾಗಿ ಜಿ.ಎಸ್.ಆರ್ 751 (ಇ) ನಿಯಮ ಸಡಿಲಗೊಳಿಸಬೇಕು. 150 ಮೀ. ಎತ್ತರದ ಮಿತಿಯನ್ನು 15 ಕಿ.ಮೀ ವ್ಯಾಪ್ತಿಗೆ ಸೀಮಿತಗೊಳಿಸಬೇಕು ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.