ಬೆಂಗಳೂರು: ‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನನ್ನ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾನು ಒಳ್ಳೆಯ ಕೆಲಸ ಮಾಡುತ್ತೇನೆ, ಅವರು ವಿರೋಧ ಮಾಡುತ್ತಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಅವರೇ ಯೋಜನೆಯ ಭೂಮಿಯನ್ನು ಡಿನೋಟಿಫೈ ಮಾಡಬಹುದಿತ್ತು. ಯಾಕೆ ಮಾಡಲಿಲ್ಲ? ರಾಜ್ಯ ಸರ್ಕಾರ ಈಗ ಡಿನೋಟಿಫೈ ಮಾಡಲು ಸಿದ್ಧವಿಲ್ಲ. ಡಿನೋಟಿಫೈ ಮಾಡಿ ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಅನುಭವಿಸುತ್ತಿರುವುದು ಅವರಿಗೆ ಗೊತ್ತು’ ಎಂದು ಹೇಳಿದರು.

‘ಬಿಡದಿ ಉಪನಗರ ಯೋಜನೆಯ ಬಗ್ಗೆ ಟೀಕೆ ಮಾಡಿದ್ದಾರೆ. ಅವರು ಮಾಡಿದ ಯೋಜನೆಯನ್ನೇ ಮುಂದುವರಿಸಲಾಗುತ್ತಿದೆ. ಯೋಜನೆಯ ಉಪಯೋಗ ಕುರಿತು ರೈತರ ಬಳಿಗೇ ತೆರಳಿ ಮನವೊಲಿಸುತ್ತೇವೆ. ರೈತರು ಎರಡು ಏಟು ಹೊಡೆಯಬಹುದು, ಬಟ್ಟೆ ಹರಿಯಬಹುದು, ಕಲ್ಲು ಎಸೆಯಬಹುದು, ಧಿಕ್ಕಾರ ಹಾಕಬಹುದು. ಅದಕ್ಕೆಲ್ಲಾ ಹೆದರಿಕೊಳ್ಳಲು ಆಗುತ್ತದೆಯೇ? ಮುಂದೆ ಅವರ ಭವಿಷ್ಯ, ಮಕ್ಕಳ ಹಾಗೂ ಆಸ್ತಿಗಳ ಭವಿಷ್ಯ ಮುಖ್ಯ. ಮುಂದಿನ 20 ವರ್ಷಗಳ ನಂತರ ಬಿಡದಿ, ಬೆಂಗಳೂರು ದಕ್ಷಿಣದ ಜನರು ಈ ಉತ್ತಮ ಕಾರ್ಯವನ್ನು ಸ್ಮರಿಸುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.