ಬೆಂಗಳೂರು: ‘ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಇದರಲ್ಲಿ ಬಗೆಹರಿಸಿಕೊಳ್ಳುವಂಥದ್ದು ಏನಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

‘ಗೊಂದಲಗಳನ್ನು ಸ್ಥಳೀಯ ನಾಯಕರೇ ಪರಿಹರಿಸಿಕೊಳ್ಳಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಭಾನುವಾರ ನೀಡಿದ್ದ ಹೇಳಿಕೆಗೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ.

‘ನಾನು, ಮುಖ್ಯಮಂತ್ರಿಯವರು ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಏನು ಹೇಳಬೇಕೊ ಹೇಳಿದ್ದೇವೆ’ ಎಂದರು.

‘ಸಮಸ್ಯೆ ಸೃಷ್ಟಿ ಮಾಡುತ್ತಿರುವವರು ನೀವೆ (ಮಾಧ್ಯಮಗಳು)’ ಎಂದೂ ಹೇಳಿದರು.

ಖರ್ಗೆ– ಎಚ್.ಕೆ. ಪಾಟೀಲ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಸದಾಶಿವನಗರದಲ್ಲಿರುವ ಮನೆಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಸೋಮವಾರ ರಾತ್ರಿ ಭೇಟಿ ಮಾಡಿ ಕೆಲಹೊತ್ತು ಮಾತುಕತೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪಾಟೀಲ, ‘ಖರ್ಗೆಯವರ ಜೊತೆ ರಾಜ್ಯದ ಸದ್ಯದ ರಾಜಕೀಯ ವಿದ್ಯಮಾನಗಳ ಕುರಿತು ವಿಚಾರ ವಿನಿಮಯ ನಡೆಸಿದ್ದೇನೆ. ಅದರಲ್ಲಿ ವಿಶೇಷ ಏನೂ ಇಲ್ಲ’ ಎಂದರು.
.ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ‘ಕೈ’ ಹಾಕಲ್ಲ: ಮಲ್ಲಿಕಾರ್ಜುನ ಖರ್ಗೆ.ರಾಜ್ಯ ಸರ್ಕಾರದಲ್ಲಿನ ನಾಯಕತ್ವದ ಗೊಂದಲ ಹೈಕಮಾಂಡ್ ಸೃಷ್ಟಿಸಿಲ್ಲ: ಖರ್ಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.