ಬೆಂಗಳೂರು: ಕಾಂಗ್ರೆಸ್ ಪಕ್ಷ ಸಂಕಷ್ಟಕ್ಕೆ ಸಿಲುಕಿದ ಸನ್ನಿವೇಶಗಳಲ್ಲಿ ‘ಆಪತ್ಬಾಂಧವ’ನ ಪಾತ್ರವನ್ನು ಡಿ.ಕೆ.ಶಿವಕುಮಾರ್ ಸಮರ್ಥವಾಗಿ ನಿರ್ವಹಿಸುತ್ತಲೇ ಬಂದಿದ್ದಾರೆ.

2002ರಲ್ಲಿ ಎಸ್.ಎಂ. ಕೃಷ್ಣ ನೇತೃತ್ವದ ಸರ್ಕಾರ ರಾಜ್ಯದಲ್ಲಿತ್ತು. ಆಗ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್ರಾವ್ ದೇಶಮುಖ್ ನೇತೃತ್ವದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ನಡೆದಿತ್ತು. ಶಾಸಕರ ಖರೀದಿ ತಪ್ಪಿಸಲು ಕಾಂಗ್ರೆಸ್ನ 40ಕ್ಕೂ ಹೆಚ್ಚು ಶಾಸಕರನ್ನು ಕರೆತಂದು, ಬೆಂಗಳೂರಿನ ಗೋಲ್ಡನ್ ಪಾಮ್ ರೆಸಾರ್ಟ್ನಲ್ಲಿ ರಕ್ಷಣೆ ನೀಡಲಾಗಿತ್ತು. ಈ ಹೊಣೆ ಶಿವಕುಮಾರ್ ಹೆಗಲೇರಿತ್ತು.

2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿಯೂ ರಾಜ್ಯಸಭೆ ಚುನಾವಣೆ ನಡೆದಿತ್ತು. ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಅಹಮದ್ ಪಟೇಲ್ ಗುಜರಾತ್ನಿಂದ ಸ್ಪರ್ಧಿಸಿದ್ದರು. ಅಲ್ಲಿನ ಕಾಂಗ್ರೆಸ್ ಶಾಸಕರನ್ನು ಸೆಳೆದು, ಪಟೇಲ್ ಸೋಲಿಸಲು ಬಿಜೆಪಿ ಯತ್ನ ನಡೆಸಿತ್ತು. ಆಗ ಆ ಶಾಸಕರ ಕರೆತಂದು, ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ರಕ್ಷಣೆ ನೀಡಲಾಗಿತ್ತು. ಆಗ ಆದಾಯ ತೆರಿಗೆ ದಾಳಿ ನಡೆದಿತ್ತು. ಇದರಿಂದಾಗಿ ಶಿವಕುಮಾರ್ ಜೈಲುವಾಸವನ್ನೂ ಅನುಭವಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.