ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕ್ಷಮೆಯಾಚಿಸಬಹುದು ಎಂಬುದಾಗಿ ಭಾವಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಓದಿ:ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಟ್ವೀಟ್: ಅಳಿಸಿ ಹಾಕಲು ಡಿಕೆಶಿ ಸೂಚನೆ

‘ರಾಜಕೀಯದಲ್ಲಿ ವಿರೋಧಿಗಳ ಜತೆಗೂ ನಾಗರಿಕ ಮೌಲ್ಯಗಳ ಜತೆಗೆ ಗೌರವಯುತವಾಗಿ ನಡೆದುಕೊಳ್ಳುವುದರಲ್ಲಿ ನಂಬಿಕೆ ಇದೆ ಎಂದು ನಿನ್ನೆ ನಾನು ಹೇಳಿದ್ದೆ. ಇದನ್ನು ಬಿಜೆಪಿಯು ಒಪ್ಪಲಿದೆ ಎಂದೂ ಭಾವಿಸಿದ್ದೇನೆ. ರಾಹುಲ್ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿರುವ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರು ಕ್ಷಮೆಯಾಚಿಸಲಿದ್ದಾರೆ ಎಂದು ಭಾವಿಸಿದ್ದೇನೆ’ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿಯ ಟ್ವಿಟರ್ ಹ್ಯಾಂಡಲ್‌ನಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಏಕವಚನದಲ್ಲಿ, ಅವಹೇಳನಾಕಾರಿಯಾಗಿ ನಿಂದಿಸಲಾಗಿತ್ತು. ಈ ಕುರಿತು ಸೋಮವಾರ ರಾತ್ರಿ ವಿಷಾದ ವ್ಯಕ್ತಪಡಿಸಿದ್ದ ಶಿವಕುಮಾರ್, ಟ್ವೀಟ್‌ಗಳನ್ನು ತಕ್ಷಣವೇ ತೆಗೆದುಹಾಕಲು ಸೂಚಿಸಲಾಗಿದೆ. ಈ ಅಚಾತುರ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

ಓದಿ:ಶಿಕ್ಷಣ ಬಿಟ್ಟು ಭಿಕ್ಷೆ ಬೇಡಿದ ಮೋದಿ: ಪ್ರಧಾನಿ ವಿರುದ್ಧ ಕೆಪಿಸಿಸಿ ವಾಗ್ದಾಳಿ

ಕಾಂಗ್ರೆಸ್ ಟ್ವೀಟ್‌ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಬಿಜೆಪಿಯು ರಾಹುಲ್ ಗಾಂಧಿ ವಿರುದ್ಧವೂ ಏಕವಚನದಲ್ಲಿ ನಿಂದಿಸಿ ಟ್ವೀಟ್ ಮಾಡಿತ್ತು.

ಓದಿ:ಹಿರಿಯ ಯುವ ನಾಯಕನ ಬುದ್ಧಿ ಬೆಳೆಯಲೇ ಇಲ್ಲ: ರಾಹುಲ್ ಗಾಂಧಿ ಬಗ್ಗೆ ಬಿಜೆಪಿ ವ್ಯಂಗ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.