ಬೆಂಗಳೂರು: ‘ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ರಾಜ್ಯ ಹಾಗೂ ದೇಶದಲ್ಲಿ ನಡೆಸಿರುವ ಮತ ಕಳವು ವಿರುದ್ಧ ಕರ್ನಾಟಕದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿದೆ. ಈ ಸಹಿ ಸಂಗ್ರಹದ ಅರ್ಜಿಗಳನ್ನು ಇದೇ ತಿಂಗಳು 10ರಂದು ದೆಹಲಿಗೆ ರವಾನಿಸಲು ತೀರ್ಮಾನಿಸಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
.‘ಮತಗಳ್ಳತನ’ ವಿರುದ್ಧ ಸಹಿ ಸಂಗ್ರಹ ಅಭಿಯಾನ.
ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇದೇ 25ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ವತಿಯಿಂದ ಬೃಹತ್ ಸಮಾವೇಶ ಮಾಡಲು ಚಿಂತನೆ ನಡೆಸಲಾಗಿದೆ’ ಎಂದರು.

‘ಸಹಿ ಸಂಗ್ರಹ ಅಭಿಯಾನವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಈ ಅಭಿಯಾನ ಇನ್ನೂ ಆಗದ ಪ್ರದೇಶಗಳಲ್ಲಿ ಇನ್ನು 3–4 ದಿನ ಕಾಲಾವಕಾಶ ನೀಡಿ ಮುಂದುವರೆಸಲು ಸೂಚಿಸಲಾಗುವುದು. ಈ ಅಭಿಯಾನದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಿರುವ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ಜೊತೆ ಈ ಸಹಿ ಸಂಗ್ರಹಿಸಿರುವ ಅರ್ಜಿಗಳನ್ನು ವಿಮಾನದಲ್ಲಿ ದೆಹಲಿಗೆ ತಲುಪಿಸಲಾಗುವುದು’ ಎಂದರು.
.ಬಿಹಾರದಲ್ಲೂ ಮತಗಳ್ಳತನ; ಚುನಾವಣಾ ಆಯುಕ್ತರೇ ದೋಷಿಗಳು ಎಂದ ರಾಹುಲ್ ಗಾಂಧಿ.
‘ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹಿಸಲಾಗಿದೆ. ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಈ ಅಭಿಯಾನದಲ್ಲಿ ಕೆಲಸ ಮಾಡಿದ್ದಾರೆ. 8-10 ಕಡೆ ಹೊರತುಪಡಿಸಿ, ಉಳಿದ ಕಡೆಗಳಲ್ಲಿ ಚೆನ್ನಾಗಿ ಸಹಿ ಸಂಗ್ರಹಿಸಲಾಗಿದೆ. ಬೂತ್ ವಾರು ಸಹಿ ಸಂಗ್ರಹಿಸಲಾಗಿದ್ದು, ಜನರಲ್ಲಿ ಮತ ಕಳವು ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.

ಪಾಲಿಕೆ ಚುನಾವಣೆಯಲ್ಲಿ ಮತಪತ್ರದ ಬಳಕೆ– ಚಿಂತನೆ:

‘ಚುನಾವಣಾ ಅಕ್ರಮದ ತನಿಖೆಗೆ ಪೂರಕ ದಾಖಲೆ ನೀಡಿ ಎಂದು ಮಾಹಿತಿ ಕೇಳಿದರೆ, ಆಯೋಗವೇ ನಮ್ಮ ಬಳಿ ಸಾಕ್ಷಿ ಕೇಳುತ್ತಿದೆ. ಹೀಗಾಗಿ, ಪಾಲಿಕೆ ಚುನಾವಣೆಗಳನ್ನು ಮತಪತ್ರಗಳ ಮೂಲಕ ನಡೆಸಲು ಚಿಂತನೆ ನಡೆಸಿದ್ದೇವೆ’ ಎಂದರು.

‘ಈ ಸಹಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಎಐಸಿಸಿ ಅವರು ತಿಳಿಸಿದ್ದಾರೆ. ಇದರ ಯಶಸ್ಸು ಬಿಎಲ್ಎಗಳು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳದ್ದಾಗಿದೆ’ ಎಂದರು.

ಮತಗಳನ್ನು ಕಳವು ಮಾಡುವುದರಲ್ಲೂ ನಿಸ್ಸೀಮರು: ‘ಬಿಜೆಪಿಯವರು ಕೇವಲ ಸುಳ್ಳು ಹೇಳುವುರದಲ್ಲಿ ಅಷ್ಟೇ ಅಲ್ಲ, ಮತಗಳನ್ನು ಕಳವು ಮಾಡುವುದರಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮ್ಯಯ ಹೇಳಿದರು.
.ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳೇನು? .
‘ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ’ ಎಂದು ಅವರು ಆರೋಪಿಸಿದರು.

‘ಮತ ಕಳವು ಆಗುವುದನ್ನು ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ’ ಎಂದರು.

‘ಬಿಜೆಪಿ ಮತಗಳ್ಳತನದ ಮೂಲಕ ಅನೇಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಿರಂತರ ಅಧ್ಯಯನ, ತಪಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ’ ಎಂದು ವಿವರಿಸಿದರು.

‘ಸಂವಿಧಾನಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ರಾಹುಲ್ ಗಾಂಧಿಯವರು, ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟವಾಗಿ, ದಾಖಲೆ ಸಮೇತ ಬಯಲಿಗೆ ಎಳೆದು ದಾಖಲೆಗಳನ್ನು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯಿಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನ ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ ಎಂದರು.

ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ನಲ್ಲಿ ಸರ್ಕಾರ ಮುಖ್ಯ ಸಚೇತಕನ ಸಲೀಂ ಅಹಮದ್ ಇದ್ದರು.
.ಸಾರ್ವಜನಿಕ ಶೌಚಾಲಯ, ರೈಲು ನಿಲ್ದಾಣವೇ ಮತದಾರರ ವಿಳಾಸ: ಮತಗಳ್ಳತನ ಆರೋಪ ಮಾಡಿದ MNS.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.