ಬೆಂಗಳೂರು: ‘ಅನಿಲ ಸಿಲಿಂಡರ್ಗಳು ಸರಿಯಾಗಿ ಸಿಗದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮನೆ ಬಳಕೆಗೆ, ಉದ್ದಿಮೆಗಳಿಗೆ ಯಾವುದೇ ತೊಂದರೆ ಆಗದಂತೆ ಕೇಂದ್ರ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು. ಕಳೆದ 15 ದಿನಗಳಿಂದಲೂ ಈ ವಿಚಾರವಾಗಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಕೊಂಡಿಲ್ಲ’ ಎಂದು ಆರೋಪಿಸಿದರು.

‘ದೇಶದ ವಿದೇಶಾಂಗ ನೀತಿ ಹಳ್ಳ ಹಿಡಿದಿದೆ. ಸರ್ಕಾರ ಈ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು. ಸಂಸದರು ಕೂಡ ಈ ಬಗ್ಗೆ ಮಾತನಾಡಬೇಕು. ಸರ್ಕಾರ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು’ ಎಂದು ಆಗ್ರಹಿಸಿದರು.

‘ಕರ್ನಾಟಕ ಹೋಟೆಲ್ ಅಸೋಸಿಯೇಷನ್ನವರು ಹೋಟೆಲ್ಗಳನ್ನು ಮುಚ್ಚಲು ತೀರ್ಮಾನಿಸಿದ್ದಾರೆ. ಇದರಿಂದ ಆಸ್ಪತ್ರೆಗಳಿಗೂ ಹೊಡೆತ ಬೀಳಲಿದೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.